ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್; ಜಿಲ್ಲಾ ನ್ಯಾಯಾಧೀಶರಾದ ಎಸ್ ನಾಗಶ್ರೀ

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ರಾಷ್ಟ್ರ ಮಟ್ಟಕ್ಕೆ ಸಂಬಂಧಿಸಿದಂತೆ “ರಾಷ್ಟ್ರೀಯ ಲೋಕ ಅದಾಲತ್” ಕಾರ್ಯಕ್ರಮವನ್ನು  ಇದೇ ಜುಲೈ 13 ರಂದು  ನಡಿಯಲಿದೆ ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ   ಎಸ್. ನಾಗಶ್ರೀ  ಅವರು ಹೇಳಿದರು.
ಅವರು ಶನಿವಾರದಂದು  ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವÀ ಎ,ಡಿ.ಆರ್. ಕಟ್ಟಡದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದರು. ಪ್ರತಿವರ್ಷ ಹೆಚ್ಚಿನ ಕೇಸ್‍ಗಳು  ಬರುತ್ತಿದ್ದು, ಅವುಗಳನ್ನು  ಇತ್ಯರ್ಥ ಮಾಡಿದ್ದೇವೆ   ಕಲಬುರಗಿ ಜಿಲ್ಲಾ ನ್ಯಾಯಾಲಯಗಳಲ್ಲಿ ಹೆಚ್ಚಿನ  50,300 ಪ್ರಕರಣಗಳು ಬಾಕಿ ಇದ್ದು,  ಇವುಗಳನ್ನು ಬೇಗನೆ ಇತ್ಯರ್ಥಪಡಿಸಲಾಗುವುದು ಎಂದರು.
ಚೆಕ್ ಬೌನ್ಸ್ ಕೇಸ್‍ಗಳು ಹಣವಸೂಲಿ ಅಪಘಾತ ಕೇಸ್‍ಗಳು  ಹಾಗೂ ಇದಲ್ಲದೇ ಸಿವಿಲ್ ವ್ಯಾಜ್ಯಗಳು ಹಲವಾರು ವರ್ಷಗಳಿಂದ  ಸುಮಾರು ಎಲ್ಲಾ ತರಹದ ಕೇಸ್ ರಾಜಿ ಸಂಧಾನ ಮಾಡುವ ವಿಚಾರ ಇರುವುದರಿಂದ  ಕಕ್ಷೀದಾರ ಮನವೋಲಿಸಿ ಸಾಧ್ಯವಾದಷ್ಟು  ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು ಎಂದರು.
ಕಲಬುರಗಿ ಜಿಲ್ಲಾ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಇದ್ದು, ಈ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಪ್ರಕರಣಗಳು ರಾಜಿ ಸಂಧಾನ ಮಾಡುವುದರ ಮೂಲಕ ಇತ್ಯರ್ಥಪಡಿಸುವ ಗುರಿಯನ್ನು ಇಟ್ಟುಕೊಳ್ಳಾಗಿದೆ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುಕೊಳ್ಳುವ ಉಭಯ ಪಕ್ಷಗಾರರಿಗೆ ಮಾಹಿತಿ ನೀಡಲಾಗುತ್ತಿದೆ. ಜನತಾ ನ್ಯಾಯಾಲಯದಲ್ಲಿ ಕೊಡುವ ತೀರ್ಪು ನ್ಯಾಯಾಲಯದಲ್ಲಿ ಕೊಡುವ ತೀರ್ಪಿನಷ್ಟು ಪರಿಣಾಮಕಾರಿಯಾಗಿರುತ್ತದೆ. ಯಾವುದೇ ಮೇಲ್ಮನವಿ ಅಥಾವ ಖರ್ಚು ವೆಚ್ಚ್ ಇರುವುದಿಲ್ಲ ಇಂತಹ ಒಂದು ಸದುಪಯೋಗ ಪಡೆದುಕೊಳ್ಳಬೇಕೆಂದರು
ಹೆಚ್ಚು ಜನರಿಗೆ ಅದರಲ್ಲೂ ಸಹ ಹಳ್ಳಿಯಲ್ಲಿರುವ ಜನ, ಮುಗ್ದರು,ಅನಕ್ಷರಸ್ಥರಿಗೆ ಇದರ ಬಗ್ಗೆ ಅರಿವಿಲ್ಲಾ ಅದಕ್ಕಾಗಿ ಇದರ ಬಗ್ಗೆ ಹೆಚ್ಚು ಪ್ರಚಾರ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ನಮ್ಮ ನ್ಯಾಯಾಲಯಗಳಲ್ಲಿ ಅತಿ ಹೆಚ್ಚು ಕೇಸುಗಳು ದಾಖಲಿಸಿದೆ ಎಷ್ಟೇ ನ್ಯಾಯಾಲಯಗಳು ಹೆಚ್ಚಿಗೆ ಮಾಡಿದ್ರು ಪ್ರಬಲವಾಗಿ ಮತಷ್ಟು ಕೇಸುಗಳು ಜಾಸ್ತಿ ಆಗುತ್ತಿವೆ ಈ ರಾಜಿ ಸಂಧಾನದ ಮೂಲಕ ಕೇಸ್‍ಗಳ ತೀರ್ಮಾನ ಮಾಡಿದರೆ ಬೇರೆ ಕೇಸ್ ತೀರ್ಮಾನ ಮಾಡುವುದಕ್ಕೆ ಸಮಯ ಸಿಗುತ್ತೆ ಹೀಗಾಗಿ ಜುಲೈ 13 ರಂದು  ರಾಷ್ಟ್ರೀಯ ಲೋಕ ಆದಾಲತ್‍ನಲ್ಲಿ ಎಲ್ಲಾರು ಅತ್ಯಂತ ಆಸಕ್ತಿಯಿಂದ ಭಾಗವಹಿಸಿ ಇತ್ಯಾರ್ಥ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
ನಿಮ್ಮ ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಕಡಿಮೆ ಖರ್ಚಿನದಲ್ಲಿ ಮತ್ತು ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು,. ಜನತಾ ನ್ಯಾಯಾಲಯದಲ್ಲಿ ನೀವು ವಕೀಲರ ಮುಖಾಂತರ ಅಥವಾ ನೀವೇ ನೇರವಾಗಿ ಭಾಗವಹಿಸಬಹುದು, ಸೌಹಾರ್ದಯುತವಾಗಿ ಪ್ರಕರಣಗಳು ಇತ್ಯರ್ಥಗೊಳ್ಳುವುದರಿಂದ ಉತ್ತಮ ಬಾಂಧವ್ಯ ಉಳಿಯುವದರ ಜೊತೆ ನೆಮ್ಮದಿಯು ಸಹ ಉಳಿಯುವುದು ಎಂದು ತಿಳಿಸಿದರು.
ಜನತಾ ನ್ಯಾಯಾಲಯದಲ್ಲಿ ಎಲ್ಲ ರೀತಿಯ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪ್ರತಿ ನಿತ್ಯ ನಡೆಯುತ್ತಿರುವ ಜನತಾ ನ್ಯಾಯಾಲಯದಲ್ಲಿ ಸಂಧಾನದ ಮುಖೇನ ಇತ್ಯರ್ಥಪಡಿಸಿಕೊಳ್ಳುವ ಅತ್ಯುತ್ತಮ ಅವಕಾಶವಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಜಿಲ್ಲೆಯಲ್ಲಿರುವ ಯಾವುದೇ ತಾಲೂಕು ಕಾನೂನು ಸೇವೆ ಸಮಿತಿಯನ್ನು ಸಂಪರ್ಕಿಸಬಹುದು. ಅದೇ ರೀತಿಯಾಗಿ ಖಾಯಂ ಜನತಾ ನ್ಯಾಯಾಲಯದ ಕಚೇರಿಯಲ್ಲಿ ಸಹ ಸಂಪರ್ಕಿಸಲು ಕೋರಲಾಗಿದೆ.
ಪತ್ರಿಕಾ ಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ  ಸದಸ್ಯಕಾರ್ಯದರ್ಶಿಗಳಾದ ಶ್ರೀನಿವಾಸ ನವಲೇ ಅವರು ಇದ್ದರು.
emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

2 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420