ಬಿಸಿ ಬಿಸಿ ಸುದ್ದಿ

ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ

  • ಮೊದಲ ಹಂತದಲ್ಲಿ 94 ಅಭ್ಯರ್ಥಿಗಳು ಸ್ಲೋವಾಕಿಯಾ
  • ದೇಶದಲ್ಲಿ ಉದ್ಯೋಗ
  • 37 ಚಾಲಕರನ್ನು ಹಂಗೇರಿಗೆ ದೇಶಕ್ಕೆ
  • ಆಯ್ಕೆಯಾದ ಅಭ್ಯರ್ಥಿಗಳಿಗೆ ವೀಸಾ ಸೇರಿದಂತೆ ಹಲವುಸವಲತ್ತುಗಳು

    ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

    ಇದರ ಭಾಗವಾಗಿ ಸ್ಲೋವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವುಯಶಸ್ವಿಯಾಗಿದೆ.

    ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಹರಸುತ್ತಿದ್ದಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವ ರೂಪಿಸಿಕೊಂಡಿದ್ದಾರೆ.

    ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇನಿಗಾವಹಿಸುತ್ತಾರೆ.

    ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟುಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೋವಾಕಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ ಗಳನ್ನು ನೇಮಕಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆಒಡಂಬಡಿಕೆ ಮಾಡಿಕೊಂಡರು.

    ಸ್ಲೋವಾಕಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನುಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ — 54 ಮಂದಿ ಐಟಿಐ, 31 ಮಂದಿ
    ಡಿಪ್ಲೊಮೊ – ಆ ದೇಶಕ್ಕೆ ಬೀಳ್ಕೊಡಲಾಗಿದೆ

    ಉಚಿತ ತರಬೇತಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪ ಇರುವ ಟೊಯೋಟಾ ಕೀರ್ಲೋಸ್ಕರ್‍ನಲ್ಲಿ ತರಬೇತಿ ನೀಡಲಾಯಿತು. ಈಮೊದಲು ಇಲ್ಲಿ ತರಬೇತಿ ಪಡೆಯಲು 35,000 ರೂ. ಖರ್ಚುವೆಚ್ಚವಾಗುತ್ತಿತ್ತು. ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳೇ ಇಲ್ಲಿತರಬೇತಿ ಪಡೆಯುತ್ತಾರೆ ಎಂಬುದನ್ನು ಮನಗಂಡ ಸಚಿವ ಪಾಟೀಲ್ ಅವರು, ಯಾವುದೇ ಒಬ್ಬ ಅಭ್ಯರ್ಥಿಯು ಒಂದೇ ಒಂದು ಪೈಸಾ ಕಟ್ಟುವುದು ಬೇಡ. ಎಲ್ಲ ಹಣವನ್ನು ಇಲಾಖೆ ವತಿಯಿಂದಲೇ ಭರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಾನವೀಯತೆ ಮೆರೆದರು.

    ತರಬೇತಿ ಪಡೆದ ನಂತರ ಸ್ಲೋವಾಕಿಯಾ ದಲ್ಲಿ ಇವರಿಗೆ ತಿಂಗಳಿಗೆ 970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂನ್ 5ರಂದು ಮೊದಲ ತಂಡ ಹಾಗೂ ಜೂ.20ರಂದು 2ನೇ ತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದುಉಳಿದ ತಂಡಗಳು ಸ್ಲೋವಾಕಿಯಾಕ್ಕೆ ತೆರಳಲಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

    ಕೆಎಸ್‍ಡಿಸಿ ಇದೀಗ 37 ಚಾಲಕರನ್ನು ಹಂಗೇರಿಗೆ ದೇಶಕ್ಕೆ ಕಳುಹಿಸಿಕೊಟ್ಟಿದೆ. ಅಲ್ಲದೆ ಮಾರಿಷಸ್‍ಗೆ ವೆಲ್ಡರ್‍ಗಳು, ಬಾಯ್ಲರ್ತಯಾರಕರು ಮತ್ತು ಇತರ ಬ್ಲೂ ಕಾಲರ್ ಕೆಲಸಗಳಿಗಾಗಿ ಪ್ರಕ್ರಿಯೆಗೆಚಾಲನೆ ನೀಡಿದ್ದಾರೆ.

    ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ, ನಾರ್ವೆಯಿಂದ ದಾದಿಯರ ಬೇಡಿಕೆಯನ್ನು ಪೂರೈಸಲು ಮುಂದಾಗಿದೆ. ಅಲ್ಲದೆ ಸ್ಲೊ ಸ್ಲೋವಾಕಿಯಾ ಕೂಡ ಹೆಚ್ಚುವರಿಯಾಗಿ ದೊಡ್ಡ ಸಂಖ್ಯೆಯ ಆಪರೇಟರ್‍ಗಳನ್ನು ಕೇಳಿಕೊಂಡಿದೆ. ಜೊತೆಗೆ ಗಲ್ಫ್ಮತ್ತು ಯುರೋಪ್ ರಾಷ್ಟ್ರಗಳಿಂದಲೂ ಬೇಡಿಕೆಗಳು ಬಂದಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕನಿರ್ದೇಶಕಿ ಎಂ.ಕನಗವಲ್ಲಿ ಹೇಳಿದ್ದಾರೆ.

    ಇಂಗ್ಲೀಷ್ ತರಬೇತಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆ ಅಗತ್ಯಇರುವುದನ್ನು ಮನಗಂಡಿರುವ ಕೌಶಲ್ಯಾಭಿವೃದ್ಧಿ ನಿಗಮಆಯ್ಕೆಯಾಗುವ ಉದ್ಯೋ ಆಕಾಂಕ್ಷಿಗಳಿಗೆ ಉಚಿತವಾಗಿ ಇಂಗ್ಲೀಷ್ಭಾಷೆ ತರಬೇತಿ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಇಂಗ್ಲೀಷ್ಭಾಷೆಯಲ್ಲಿ ಪರಿಣಿತಿ ಹೊಂದಿರುವವರನ್ನು ಆಯ್ಕೆ ಮಾಡಿಕೊಂಡುತರಬೇತಿ ನೀಡಲಿದೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago