ಕಲಬುರಗಿ: ಮಾಡಬೂಳ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ರಾತ್ರಿ ನಡೆದಿದೆ.
ದೊಡ್ಡೇಶ್ (40) ನೇಣಿಗೆ ಶರಣಾಗಿದ್ದಾರೆ. ಕಲಬುರಗಿ ನಗರದ ಹೈ ಕೋರ್ಟ್ ಬಳಿ ವಾಸವಾಗಿರುವ ದೊಡ್ಡೇಶ್, ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ನಗರದ ವಿಶ್ವವಿದ್ಯಾಲಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.