ಚಿತ್ತಾಪುರ; ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು ಉಪಾಧ್ಯಕ್ಷ ಇಬ್ರಾಹೀಂ ನಾಯ್ಕೋಡಿ ಸಾತನೂರ ಅವರು ಒತ್ತಾಯಿಸಿದ್ದಾರೆ.
ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಸಲ್ಲಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ಎಪಿಎಂಸಿ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಎಂದರು.
ಇದೀಗ ಹಾಲಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಜಾತಿಗಳ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಕ್ತಾರ್ ಪಟೇಲ್ ಅವರ ಸೇವೆಯನ್ನು ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
View Comments
Haan Muktar Patel ko dena chaiye