ಕಲಬುರಗಿ: ಯಾವುದೇ ಗೌರವಧನವಿಲ್ಲದೆ ದುಡಿಯುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕಲಬುರಗಿಯಲ್ಲಿ ಶನಿವಾರ ಸಚಿವರನ್ನು ಭೇಟಿಯಾದ ಪತ್ರಕರ್ತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ 2024-25ರ ತಮ್ಮ ಬಜೆಟ್ ಭಾಷಣದಲ್ಲಿ ಮಂಡಿಸಿದ್ದಾರೆ. ಆದರೆ ಇದುವರೆಗೂ ಆ ಕುರಿತು ಸರಕಾರಿ ಆದೇಶ ಹೊರಡಿಸಿಲ್ಲ. ಆದ್ದರಿಂದ ಕೂಡಲೇ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸುವ ಕುರಿತು ಸರಕಾರಿ ಆದೇಶ ಹೊರಡಿಸುವಂತೆ ಸರ್ಕಾರದ ಸಾರಿಗೆ ಸಚಿವರ ಗಮನಕ್ಕೆ ತರುವಂತೆ ಒತ್ತಾಯಿಸಲಾಯಿತು.
ಈ ವೇಳೆ ಮಾತನಾಡಿದ ಸಚಿವರು, ಬಜೆಟ್ ಮಂಡಿಸಿದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸರ್ಕಾರಿ ಆದೇಶ ಹೊರಡಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಸಂಪುಟ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಸಂಘದ ಜಿಲ್ಲಾ ಕಾರ್ಯದರ್ಶಿ ವೀರೇಂದ್ರ ಕುಮಾರ ಕೊಲ್ಲೂರ, ತಾಲೂಕು ಘಟಕದ ಗೌರವಾಧ್ಯಕ್ಷ ರವಿಶಂಕರ ಬುರ್ಲಿ, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮಶಾಕ್ ಮುಲ್ಲಾ ಕಮರವಾಡಿ, ಮಾಜಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ವಿಕ್ರಮ್ ತೇಜಸ್, ದಯಾನಂದ ಖಜೂರಿ, ಕರುಣೆೇಶ ಕೆಲ್ಲೂರು, ಅನಂತನಾಗ ದೇಶಪಾಂಡೆ, ಅಣ್ಣಾರಾಯ ಪಾಟೀಲ, ಸಂತೋಷ್ ಕಟ್ಟಿಮನಿ, ಪೃಥ್ವಿರಾಜ್ ಸಾಗರ್ ಇದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…