ಕೆರೆ‌ ಸಂರಕ್ಷಣೆಗೆ ಮುಂದಾಗಿ; ಸಚಿವ ಕೃಷ್ಣ ಬೈರೇಗೌಡ

0
25

ಜಿಲ್ಲೆಗಳಲ್ಲಿ ಜಿವ ಜಲದ‌ ಮೂಲವಾಗಿರುವ ಸಂರಕ್ಷಣೆಗೆ ಕೆರೆಗಳ ಸಂರಕ್ಷಣೆಗೆ ವಿಮೆ., ಆರ್.ಐ, ಸರ್ವೆ ಇಲಾಖೆ‌ ಮುಂದಾಗಬೇಕು. ಗಡಿ ಗುರುತಿಸಲು ಬಂಡ್ ಅಥವಾ ಸಾಧ್ಯವಾದರೆ ಫೆನ್ಸಿಂಗ್ ಹಾಕಬೇಕು. ತಹಶೀಲ್ದಾರರು ಇದನ್ನು‌ ಮುಂದಾಳತ್ವ ವಹಿಸಬೇಕು ಎಂದರು.

ಕಲಬುರಗಿ; ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ-ಅತೀ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.‌ಗಳಂತೆ 500 ಕೋಟಿ ರೂ. ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Contact Your\'s Advertisement; 9902492681

ಸೋಮವಾರ ಇಲ್ಲಿನ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ‌ ಮಾತನಾಡಿದ ಅವರು, ಕಳೆದ ವರ್ಷ ಅತ್ಯಂತ‌ ಭೀಕರ‌ ಬರಗಾಲದಿಂದ ರೈತ ಸಮುದಾಯ ತತ್ತರಿಸಿತು. ಹೀಗಾಗಿ ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದರು.

ಕಳೆದ ವರ್ಷ ಬರಗಾಲ ಕಾರಣ ಕೇಂದ್ರ ಸರ್ಕಾರ ಕಾಲಮಿತಿಯಲ್ಲಿ ರೈತರಿಂದ ಅರ್ಜಿ ಕಾಯದೆ ಪರಿಹಾರ ನೀಡದ ಕಾರಣ ಸುಮಾರು 40 ಲಕ್ಷ ರೈತರಿಗೆ ರಾಜ್ಯ ಸರ್ಕಾರವೆ ಎಸ್.ಡಿ.ಆರ್.ಎಫ್. ನಿಧಿಯಡಿ 2,451 ಕೋಟಿ ರೂ.‌ ಬರಗಾಲ ಪರಿಹಾರ ನೀಡಿದೆ. ಇದು ದೇಶದಲ್ಲಿ ದೊಡ್ಡ ಮೊತ್ತದ ಪರಿಹಾರ ಆಗಿದೆ ಎಂದರು.

ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್. ಹಣ ಬಿಡುಗಡೆಯಲ್ಲಿ‌ ವಿಳಂಬ‌ ಧೋರಣೆ ಅನುಸರಿಸಿದ ಕಾರಣ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದ ಕಾರಣ ಕೇಂದ್ರ ಹಣ ಬಿಡುಗಡೆ ಮಾಡಿತು. ಅದು ಹಣ ಸಹ ರೈತರಿಗೆ ನೀಡಲಾಗಿದೆ. ಇನ್ನು ಬೆಳೆ ವಿಮೆನಡಿ 1,756 ಕೋಟಿ ರೂ. ಪರಿಹಾರ ರೈತರ ಖಾತೆಗೆ ಹಣ ನೀಡಲಾಗಿದೆ. ಒಟ್ಟಾರೆ ಬರಗಾಲ ಕಾರಣ ಎಸ್.ಡಿ.ಆರ್.ಎಫ್-ಎನ್.ಡಿ.ಆರ್.ಎಫ್ ಹಣ, ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹೀಗೆ ಸುಮಾರು 6,000 ಕೋಟಿ ರೂ. ಪರಿಹಾರ ಅನ್ನದಾತರಿಗೆ ಡಿ.ಬಿ.ಟಿ. ಮೂಲಕ ನೀಡಲಾಗಿದೆ ಎಂದರು.

ಇನ್ನ ಹಳೇ ವರ್ಷದ ಅತಿವೃಷ್ಟಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಇದಕ್ಕೆ ಇತಿಶ್ರೀ ಹಾಡಲು ಮುಂದಿನ‌ ಒಂದು ವಾರದೊಳಗೆ ಸದರಿ ಕಾಮಗಾರಿ ಹಣ ಬಿಡುಗಡೆಗೆ ಡಿ.ಸಿ.ಗಳು ಪ್ರಸ್ತಾವನೆ ಸಲ್ಲಿಸಬೇಕು. ಇದುವೇ ಡೆಡ್ ಲೈನ್ ಎಂದ ಅವರು, ಮುಂದೆ ಯಾವುದೇ ಕಾರಣಕ್ಕೂ ಹಳೇ ಕಾಮಗಾರಿಗೆ ಅನುದಾನ ಪ್ರಸ್ತಾವನೆ ಕಲುಹಿಸಿದಲ್ಲಿ ಅದನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಪ್ರಾಧಿಕಾರದ ವೈಜ್ಣಾನಿಕ ಅಧಿಕಾರಿ ಡಾ.ಶಿವಕುಮಾರ ಇದೂವರೆಗೆ ಮಳೆ ಬಿದ್ದ ಪ್ರಮಾಣ ಮತ್ತು ಮುಂದೆ ಪ್ರವಾಹಕ್ಕೆ ತುತ್ತಾಗಬಹುದಾದ ಪ್ರದೇಶಗಳ ಕುರಿತು ಪ್ರ್ಯಾತ್ಯಕ್ಷಿಕೆ ಮೂಲಕ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಸುಶೀಲಾ ಬಿ., ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಚಂದ್ರಶೇಖರ ನಾಯಕ್, ಕೊಪ್ಪಳ ಡಿ.ಸಿ. ನಳಿನ್ ಅತುಲ್, ಬಳ್ಳಾರಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ, ಸಾಮಾಜಿಕ ಪಿಂಚಣಿ ವಿಭಾಗದ ನಿರ್ದೇಶಕ ರಂಗಪ್ಪಾ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಷನ್ ಎಂ.ಡಿ ವಸಂತಕುಮಾರ, ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಸೇರಿದಂತೆ ವಿಭಾಗದ ಸಹಾಯಕ ಆಯುಕ್ತರು, ತಹಶೀಲ್ದಾರರು, ಡಿ.ಡಿ.ಎಲ್.ಆರ್ ಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here