ಗ್ಯಾಸ ಸಿಲಿಂಡರ ಸ್ಫೋಟದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯ

ಕಲಬುರಗಿ:  ನಗರದ ಸಪ್ತಗಿರಿ ಹೊಟೆಲ್‍ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಗಾಯಗೊಂಡಿರುವ ಕಾರ್ಮಿಕರಿಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಹೋಟೆಲ್ ಮಾಲೀಕರು ಸೂಕ್ತ ಪರಿಹಾರ ನೀಡಬೇಕು ಮತ್ತು ಕಲಬುರಗಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಇನ್ನೂ 2 ಅಗ್ನಿಶಾಮಕ ಠಾಣೆಗಳನ್ನು ಪ್ರಾರಂಭಿಸಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ಎನ್. ದೇಗಾಂವ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನಗರದ ಸಪ್ತಗಿರಿ ಹೊಟೆಲ್‍ನಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, 10-12 ಜನ ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇವರ ಕುಟುಂಬಗಳಿಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಹೋಟೆಲ್ ಮಾಲೀಕರ ವತಿಯಿಂದ ಸೂಕ್ತ ಪರಿಹಾರ ನೀಡಬೇಕು. ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ಸಂಭವಿಸದಂತೆ ನಗರದ ಎಲ್ಲಾ ಹೋಟೆಲ್‍ಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಹೊಟೆಲ್‍ಗಳಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಇಡುವಂತೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಅದೇ ರೀತಿ ಕಲಬುರಗಿ ನಗರದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಕೇವಲ ಒಂದೇ ಅಗ್ನಿಶಾಮಕ ಠಾಣೆ ಇರುತ್ತದೆ. ಇದರಿಂದಾಗಿ ಇಡೀ ಕಲಬುರಗಿ ನಗರದಲ್ಲಿ ಎಲ್ಲಾದರೂ ಅಗ್ನಿ ದುರಂತಗಳು ಸಂಭವಿಸಿದರೆ ಅಲ್ಲಿಗೆ ಹೋಗಿ ನಂದಿಸುವಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ ಸೇಡಂ ರಸ್ತೆಯ ಕಡೆ ಒಂದು ಮತ್ತು ರಾಮ ಮಂದಿರ ರಸ್ತೆಯ ಕಡೆ ಒಂದು ಒಟ್ಟು 2 ಅಗ್ನಿಶಾಮಕ ಠಾಣೆಗಳನ್ನು ಪ್ರಾರಂಭಿಸಿದರೆ ಆಯಾ ಸ್ಥಳಗಳಲ್ಲಿ ಅಗ್ನಿ ದುರಂತಗಳು ಸಂಭವಿಸಿದರೆ ಸ್ಥಳಕ್ಕೆ ಕೂಡಲೇ ಹೋಗಲು ಅನುಕೂಲವಾಗುತ್ತದೆ. ಇದರಿಂದಾಗಿ ಅಗ್ನಿ ದುರಂತದಿಂದ ಆಗುವ ನಷ್ಟವನ್ನು ಕಡಿಮೆ ಮಾಡಬಹುದಾಗಿದೆ.

ಆದ್ದರಿಂದ ತಾವೂಗಳು ಈ ಕುರಿತು ಕೂಡಲೇ ಸೂಕ್ತ ಕ್ರಮಕೈಗೊಂಡು ಹೋಟೆಲ್ ಕಾರ್ಮಿಕರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಮತ್ತು ಜಿಲ್ಲೆಯಲ್ಲಿ ಇನ್ನೂ 2 ಹೆಚ್ಚಿನ ಅಗ್ನಿಶಾಮಕ ಠಾಣೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಸಂತೋಷ ಪಾಟೀಲ್, ಸಂಘಟನಾ ಕಾರ್ಯದರ್ಶಿ ಚಂದ್ರು ಸಲಗರ, ಅಶ್ವಥ ತಾರಫೈಲ್,ರಾಘವೇಂದ್ರ ಬಿರಾದಾರ,ಶ್ರೀಶೈಲ ಕನ್ನಡಗಿ,ಭೀಮಾಶಂಕರ ಕೊರವಿ, ಬಾಲಾಜಿ ಗೋಡಕೆ, ಈಶ್ವರ ಕುಡನೂರ ಸೇರಿದಂತೆ ಇತರರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

35 mins ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

38 mins ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

40 mins ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

51 mins ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

57 mins ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

59 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420