ಪಂಡರಪುರ ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.

ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದತ್ತಾತ್ತೇಯ ದೇವಸ್ಥಾನದ ಹಾಗೂ ದೇವಸ್ಥಾನದ ವ್ಯಾಪ್ತಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ತಯ್ಯಾರಿಸಲಾದ ಮಾಸ್ಟರ್ ಪ್ಲಾನ್ ಗೆ ಮಂಜೂರಾತಿ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ. ಮಾತಾಡಿದ ಅವರು ಗಾಣಗಾಪುರ.ಕ್ಷೇತ್ರ ಈ.ಭಾಗದ ದೊಡ್ಡ ಕ್ಷೇತ್ರವಾಗಿದೆ ಪ್ರತಿನಿತ್ಯ ನೂರಾರು ಭಕ್ತರು ದರುಶನ ಪಡೆಯಲು ಆಗಮಿಸುತ್ತಾರೆ ಇದನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಅದರಂತೆ ಕೆಲಸ ಮಾಡಲಾಗುವುದು ಭಕ್ತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗತ್ತದೆ ಎಂದರು

ಅಫಜಲಪೂರ ಶಾಸಕ ಎಂ.ವೈ. ಪಾಟೀಲ ಅವರು ಮಾತನಾಡಿ, ಪ್ರಸಾದ ಯೋಜನೆ ಅಡಿಯಲ್ಲಿ ಪ್ತಸ್ತಾಪಿಸಲಾದ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಸರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಬೇಕು. ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಕೆಲಸ ಕಾರ್ಯಗಳನ್ನು ಜವಬ್ದಾರಿಯಿಂದ ನಿರ್ವಹಿಸಬೇಕೆಂದು ಸಭೆಯ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಮಾತನಾಡಿ, ದತ್ತಾತ್ತೇಯ ದೇವಸ್ಥಾನಕ್ಕೆ ಬಂದಂತಹ ಭಕ್ತರಿಗೆ ನಿತ್ಯ ಅಭಿಷೇಕ ಪೂಜರೆ ಮಾಡಲು ಪ್ರತ್ಯೇಕ ಅಭಿಷೇಕ ಕೋಣೆ ವ್ಯವಸ್ಥೆ ಮಾಡಬೇಕು, ಬಸ್ ಸ್ಟ್ಯಾಂಡ್‍ವರೆಗೆ ಹಾಗೂ ದೇವಸ್ಥಾನದಿಂದ ಹನುಮಾನ ದೇವಸ್ಥಾನದ ವರೆಗೆ ವಾಕ್ ವೇವ್ ಅಭಿವೃದ್ಧಿ ಮಾಡಬೇಕು ಎಂಬ ವಿಷಯವನ್ನು ಅಧಿಕಾರಿಗಳು ಚರ್ಚಿಸಿದರು.

ದತ್ತಾತ್ತೇಯ ದೇವಸ್ಥಾನದಲ್ಲಿ ವ್ಯಾಪ್ತಿಯಲ್ಲಿ ಬರುವ ಸಂಗಮ ದೇವಸ್ಥಾನ ಕಲ್ಲೇಶ್ವರ ದೇವಸ್ಥಾನ ಹಾಗೂ ಚಿದಾನಂದ ದೇವಸ್ತಾನಗಳ ಭದ್ರತಾ ಹಿತದೃಷ್ಟಿಯಿಂದ ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ಪಂಢರಾಪುರ, ತುಳಜಾಪುರ ಮಾದರಿಯಲ್ಲಿ ವ್ಯವಸ್ಥೆ ಕಲ್ಪಿಸಬೇಕೆಂದು ಮಾಜಿ ಶಾಸಕ ಮಾಲೀಕಯ್ಯ ವಿ ಗುತ್ತೇದಾರ ಅವರು ಹೇಳಿದರು.

ದೇವಸ್ಥಾನಕ್ಕೆ ಬೇಕಾಗುವ ಎಲ್ಲ ರೀತಿಯಾಗಿ ಪ್ಲ್ಯಾನ್ ಮಾಡಿ, ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ತಾಪಡೇ ಧರ್ಮಶಾಲೆಯ ಹತ್ತಿರ ಪಂಚಾಯತ್ ಜಾಗವಿದ್ದು, ಬಂದಂತಹ ಭಕ್ತರಿಗೆ ನೆರವಾಗುವಂತೆ ಶೌಚಾಲಯ ನಿರ್ಮಾಣ ಮಾಡಬೇಕು ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ನಿರ್ಮಿಸಲಾದ ಕಿಂಡಿಯ ಕಿರಿದಾಗಿದ್ದು, ಭಕ್ತರಿಗೆ ದೇವರು ಕಾಣುವಂತೆ ದೊಡ್ಡದಾಗಿ ಮಾರ್ಪಡಿಸುವುದು ದೇವಸ್ಥಾನದ ಅರ್ಚಕರೊಂದಿಗೆ ಚರ್ಚಿಸಿ ನಿಯಮಾನುಸರ ಕ್ರಮಕೈಗೊಳ್ಳಲಾಗುವುದು ಎಂದರು.

ವಿಶೇಷವಾಗಿ ದೇವಸ್ಥಾನಕ್ಕೆ ಪ್ರತಿ ಹುಣ್ಣೆಮೆಯ ದಿನದಂದು ನಾನಾ ರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕಾಗಿ ಬರುತ್ತಾರೆ. ಬಂದಂತಹ ಭಕ್ತರು ತಮ್ಮ ಭಕ್ತಿ ಸೇವೆಯನ್ನು ಹಣದ ಮೂಲಕ ಸಂದಾಯ ಮಾಡುತ್ತಿದ್ದು, ಧಾರ್ಮಿಕ ದತ್ತಿ ಇಲಾಖೆಗೆ ಸರಿಯಾಗಿ ಪಾವತಿಯಾಗದೇ ಇರುವ ಕುರಿತು ಭಕ್ತಾಧಿಗಳು ದೂರು ನೀಡಿದ್ದು, ಪ್ರತಿ ಹುಣ್ಣೆಮೆಯಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ ದೇವಾಲಯದ ವತಿಯಿಂದ ವಿಶೇಷ ದರ್ಶನಕ್ಕೆ ಪಾಳಿ ಪ್ರಕಾರ ರಸೀದಿಗಳನ್ನು ನೀಡಲಾಗುತಿದೆ ಕೆಲವು ಸಂದರ್ಭಗಳಲ್ಲಿ ಮಧ್ಯವರ್ತಿಗಳು ಕಂಡು ಬರುತ್ತಾರೆ ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೋಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಜರುಗಿಸಲು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಪೋಲಿಸರು ತಮಗೆ ನೀಡಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಯಾವುದ ಕರ್ತವ್ಯ ಲೋಪ ಆಗದಂತೆ ಕ್ರಮವಹಿಸಬೇಕು ಎಂದರು.

ದೇವಸ್ಥಾನದ ಹುಂಡಿ ಪೆಟ್ಟಿಗೆಯ ಏಣಿಕೆ ಕಾರ್ಯವನ್ನು ದೇವಸ್ಥಾನದ ಸಿಬ್ಬಂದಿಗಳ ಬದಲಾಗಿ ಬ್ಯಾಂಕ್ ಸಿಬ್ಬಂದಿಗಳ ಮುಖಾಂತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾಅಧಿಕಾರಿ ಆಫ್ರೀನ್, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ದೇವಾಲಯದ ಆರ್ಚಕರು, ತಾಲೂಕ ಪಂಚಾಯತ್ ಅಧ್ಯಕ್ಷರು, ಸಮಾಜದ ಮುಖಂಡರು ಭಾಗವಹಿಸಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

8 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

8 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

8 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

8 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420