ಮಹಿಳೆಯರು ಶಿಕ್ಷಿತರಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ; ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕರೆ

ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ‌ ಶಿಬಿರ ಉದ್ಘಾಟನೆ

ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ ಇಲ್ಲಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಸಾಧಿಸಬೇಕು ಎಂದು ರಾಜ್ಯ‌ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಹಿಳೆಯರಿಗೆ ಕರೆ ನೀಡಿದರು.

ನಾಲ್ಕು ದಿನಗಳ ಪ್ರವಾಸಕ್ಕೆ ಕಲಬುರಗಿಗೆ ಆಗಮಿಸಿರುವ ಅವರು ಮಂಗಳವಾರ ಅಫಜಲಪೂರ ತಾಲೂಕಿನ ಗೊಬ್ಬುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ಮಹಿಳಾ ಆರೋಗ್ಯ ತಪಾಸಣಾ‌ ಶಿಬಿರ ಉದ್ಘಾಟಿಸಿ ಮಾತನಾಡಿದರು‌.

ಸಾಕ್ಷರತೆ ಕೊರತೆಯೆ ಮಹಿಳೆಯರ ಹಿಂದುಳಿವಿಕೆಗೆ ಪ್ರಮುಖ ಕಾರಣವಾಗಿದೆ. ಮೊದಲು ಸಾಕ್ಷರರಾಗಬೇಕಿದೆ.‌ ಸಾಕ್ಷರತೆಯಿಂದ ಮಾತ್ರ ಪ್ರಗತಿ ಸಾಧ್ಯ ಎಂದ ಅವರು, ತಾನು ಬೆಂಗಳೂರಿನ ಮಗಳಾದರು ಕಲಬುರಗಿ ಸೊಸೆಯಾಗಿರುವೆ. ಕಳೆದ 12 ವರ್ಷ ಇಲ್ಲಿನ ಹೆಚ್.ಕೆ.ಇ ಸಂಸ್ಥೆಯ ಡೆಂಟಲ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿರುವೆ ಎಂದು ತಮ್ಮ ಕಲಬುರಗಿ ನಂಟು ಬಿಚ್ಚಿಟ್ಟರು.

ಇತ್ತೀಚೆಗೆ ಮಹಿಳೆಯರಲ್ಲಿ ಸ್ತನ, ಗರ್ಭ ಕ್ಯಾನ್ಸರ್ ಹೆಚ್ಚುತ್ತಿದ್ದು, ಇಂತಹ ಆರೋಗ್ಯ ಶಿಬಿರಗಳ ಮೂಲಕ ಉಚಿತ ಚಿಕಿತ್ಸೆ ಪಡೆಯಬೇಕು. ಮಹಿಳಾ‌ ಸಬಲೀಕರಣ‌ ಮತ್ತು ಕಲ್ಯಾಣಕ್ಕೆ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಲಾಭ ಪಡೆದು ಜೀವನದಲ್ಲಿ ಮುಂದೆ ಬರಬೇಕೆಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ ಅಧ್ಯಕ್ಷರು ಶಿಬಿರದಲ್ಲಿ ಭಾಗವಹಿಸಿದ ಮಹಿಳೆಯರೊಂದಿಗೆ ಆತ್ಮೀಯವಾಗಿ ಸಂವಾದ ಕೈಗೊಂಡರು.

ಇದಕ್ಕು‌ ಮುನ್ನ ಆರೋಗ್ಯ ಕೇಂದ್ರದ ಹೆರಿಗೆ ಕೋಣೆ, ಲೇಬರ್ ರೂಂ, ಓ.ಪಿ.ಡಿ ಹೀಗೆ ವಿವಿಧ ಕೋಣೆ ಭೇಟಿ ನೀಡಿದ ಅಧ್ಯಕ್ಷರು ರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಪಾಣೆಗಾಂವ ಮತ್ತು ಪಾಣೆಗಾಂವ ತಾಂಡಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಡಾ.ನಾಗಲಕ್ಷ್ಮೀ ಚೌಧರಿ ಅವರು, ಪುಟಾಣಿ ಮಕ್ಕಳು, ಗರ್ಭಿಣಿ-ಬಾಣಂತಿ ಮಹಿಳೆಯರಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸ್ಥಳೀಯ ಸಿಬ್ಬಂದಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಇದೂವರೆಗೆ ವಿದ್ಯುತ್ ಸಂಪರ್ಕ ಒದಗಿಸಿಲ್ಲ ಎಂದು ಅಧ್ಯಕ್ಷರ ಗಮನಕ್ಕೆ ತಂದರು. ಇದಕ್ಕೆ ಸಿಡಿಮಿಡಿಗೊಂಡ ಅಧ್ಯಕ್ಷರು, ವಿದ್ಯುತ್ ಇಲ್ಲ ಅಂದರೆ‌ ಮಕ್ಕಳ ಪಾಲನೆ ಪೋಷಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿ ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಪಿ.ಡಿ.ಓ ಗೆ ನಿರ್ದೇಶನ ನೀಡಿದಲ್ಲದೆ ಸೋರುತ್ತಿರುವ ಅಂಗನವಾಡಿಯ ದುರಸ್ತಿ ಸಹ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಡಿ.ಸಿ.ಪಿ.ಓ ಮಂಗಳಾ ಪಾಟೀಲ, ಪ್ರಭಾರಿ ಡಿ.ಎಚ್.ಓ ಡಾ.ಸುರೇಶ ಮೇಕಿನ್, ಜಿಲ್ಲಾ ಆರ್.ಸಿ.ಎಚ್.ಓ ಡಾ.ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ರತಿಕಾಂತಿ, ತಾಲೂಕ ಪಂಚಾಯತ್ ಇ.ಓ ವೀರಣ್ಣ ಕೌಲಗಿ, ಟಿ.ಎಚ್.ಓ ಡಾ.ರವಿ ಬಿರಾದಾರ, ಸ್ಥಳೀಯ ವೈದ್ಯಾಧಿಕಾರಿ ಡಾ.ಅಪರ್ಣಾ‌ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು ಇದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆರೋಗ್ಯ ತಪಾಸಣೆಗೆ ಒಳಗಾದರು.

ಕೇಂದ್ರ ಕಾರಾಗೃಹಕ್ಕೆ ಭೇಟಿ: ನಂತರ ಮಹಿಳಾ ಆಯೋಗದ ಅಧ್ಯಕ್ಷರು ಕಲಬುರಗಿಯ ನಂದಿಕೂರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿ ಬಂಧಿಯಾದ ಮಹಿಳಾ ಕೈದಿಗಳನ್ನು ಭೇಟಿಯಾಗಿ ಮಾತನಾಡಿಸಿದರು. ಕೇಂದ್ರ‌ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ಪಿ.ರಂಗನಾಥ, ಸಹಾಯಕ ಅಧೀಕ್ಷಕ ಬಿ.ಸುರೇಶ ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

5 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

5 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

5 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

5 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

5 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420