ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ: ಪ್ರೀತಿ ಹೊನ್ನಗುಡಿ

0
52

ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೇ ಭಂಡತನ ತೋರಿದ ಕಾಂಗ್ರೆಸ್‌ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ 2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ.

ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರೋಕೊಷ್ಟದ ರಾಜ್ಯ ಸಮಿತಿ ಸದಸ್ಯೆ ಪ್ರೀತಿ ಎಸ್ ಹೊನ್ನಗುಡಿ ಹೇಳಿದರು.

Contact Your\'s Advertisement; 9902492681

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2.10 ರೂ. ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ.

ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದರೆ.

ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಬಂಪರ್ ಕೊಡುಗೆ ಕೊಟ್ಟಿದೆ. ಈ ದರ ಏರಿಕೆ ಲಾಭ ಹಾಲು ಉತ್ಪಾದಕರಿಗೆ ಸಿಗಲಿದೆಯೋ ಅಥವಾ ಕೆಎಂಎಫ್ ಜೋಳಿಗೆ ಹೋಗಲಿದೆಯೋ? ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here