ಕಲಬುರಗಿ ಡಿ.ಸಿ. ವಿರುದ್ಧ ಸುಳ್ಳು ಆರೋಪ: ಕಾನೂನು ಕ್ರಮಕ್ಕೆ‌ ಒತ್ತಾಯಿಸಿದ ಭೀಮ್ ಅರ್ಮಿ ಮನವಿ

ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ ಮಾಡಿ ಮಾಧ್ಯಮಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಭೀಮ್‌ ಆರ್ಮಿ ರಾಜ್ಯ ಯುವ ಘಟಕ ಒತ್ತಾಯಿಸಿದೆ.

ಸೋಮವಾರ ಕಲಬುರಗಿ ನಗರಕ್ಕೆ ಆಗಮಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿರುವ ರಾಜ್ಯ ಯುವ ಘಟಕದ ಅಧ್ಯಕ್ಷ ಸಂತೋಷ‌ ಬಿ. ಪಾಳಾ ಅವರು, ಜಿಲ್ಲೆಯ ಪ್ರಗತಿಗೆ ಹಗಲಿರುಳು ಶ್ರಮಿಸುತ್ತಿರುವ ಜಿಲ್ಲಾಧಿಕಾರಿಗಳ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದು ಇತ್ತೀಚೆಗೆ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಪತ್ರದಲ್ಲಿ ಅವರು ಒತ್ತಾಯ ಮಾಡಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾ ರೈತರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುತ್ತಿರುವ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ತಾಯಿ ಹೃದಯದವರಾಗಿದ್ದಾರೆ. ಕಳೆದ ವರ್ಷ ಜಿಲ್ಲೆ 185 ಕೋಟಿ ರೂ. ಬೆಳೆ ವಿಮೆ ಹಾಗೂ 330 ಕೋಟಿ ರೂ. ಬೆಳೆ ಪರಿಹಾರ ದೊರಕುವಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಮಹತ್ತರವಾಗಿದೆ ಎಂದಿದ್ದಾರೆ.

ದಿನದ 24 ಗಂಟೆಯೂ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ರಾಜ್ಯದಲ್ಲಿಯೇ ಕಲಬುರಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಹೊರಟಿರುವ ಹೆಮ್ಮೆಯ ಜಿಲ್ಲಾಧಿಕಾರಿಗಳ ಬಗ್ಗೆ ಈ ರೀತಿ ಇಲ್ಲಸಲ್ಲದ ಮಾಹಿತಿಯನ್ನು ಮಾಧ್ಯಮದಲ್ಲಿ ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಸ್ತ ಕಲಬುರಗಿ ಜಿಲ್ಲೆಯ ಜನತೆಯ ಪರವಾಗಿ ಸಂತೋಷ‌ ಬಿ.‌ಪಾಳಾ ಪತ್ರದಲ್ಲಿ ಸಚಿವರಿಗೆ ಒತ್ತಾಯ ಮಾಡಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

4 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

5 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

5 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

5 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

5 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420