ಕಲಬುರಗಿಯಲ್ಲಿ ಕನ್ನಡ ಜಾಗೃತಿ ಸಮಾವೇಶ 30 ರಂದು

0
96

ಕಲಬುರಗಿ: ಕಲೆ, ಸಾಹಿತ್ಯ, ಸಂಗೀತ ಮತ್ತು ಸಾಂಸ್ಕøತಿಕ ಪರಂಪರೆಯನ್ನು ಬಿಂಬಿಸುವ ಕಾರ್ಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ತೊಡಗಿಸಿಕೊಂಡಿದೆ. ಈ ಹಿನ್ನೆಲೆಯಾಗಿ ಇದೇ ಜೂನ್ 30 ರಂದು ಸಾಯಂಕಾಲ 4.30 ಕ್ಕೆ ನಗರದ ಕನ್ನಡ ಭವನದ ಅಂಗಳದಲ್ಲಿ ಕನ್ನಡದ ಏಳ್ಗೆಗೆ ಅಭಿಮಾನದ ಅಭಿಯಾನದ ಕನ್ನಡ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.

ಚರ್ಚಾಗೋಷ್ಠಿ, ನುಡಿ ಸೇವಕರಿಗೆ ಸತ್ಕಾರ ಮತ್ತು ಸರಕಾರಿ ಶಾಲೆಯ ಹತ್ತನೇ ಮತ್ತು ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

Contact Your\'s Advertisement; 9902492681

ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಇನ್ನಷ್ಟು ಅರ್ಥಪೂರ್ಣತೆಯನ್ನು ಕಂಡುಕೊಳ್ಳಲಿದೆ. ನಮ್ಮ ಉಸಿರು, ಹೃದಯದ ಬಡಿತ, ನಮ್ಮ ನರನಾಡಿಗಳು ಕನ್ನಡ ಕನ್ನಡ ಎನ್ನಬೇಕು. ಅಂತಹದ್ದೊಂದು ಭಾವನೆ ನಮ್ಮೆಲ್ಲರಲ್ಲಿ ಮೂಡಬೇಕೆಂಬ ಆಶಯ ಈ ಸಮಾವೇಶದ್ದಾಗಿದೆ. ಇಂತಹ ಕಾರ್ಯಕ್ರಮಗಳು ಆಗಾಗ ಹಮ್ಮಿಕೊಳ್ಳುವ ಮೂಲಕ ಪರಿಷತ್ತು ಕನ್ನಡದ ತೇರನ್ನು ಸಮರ್ಪಕವಾಗಿ ಎಳೆದು ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹಚ್ಚುವ ಕಾರ್ಯ ನಿರಂತರವಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಭಾಗದಲ್ಲಿ ಕನ್ನಡ ಭಾಷೆಯು ಮರಾಠಿ, ಉರ್ದು, ತೆಲುಗು ಭಾಷೆಗಳ ಪ್ರಭಾವಗಳ ನಡುವೆಯೂ ಬೆಳೆದು ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಇಂಥ ಪರಿಚಯಾತ್ಮಕದ ಸಮಾವೇಶದ ಮೂಲಕ ಇಂದಿನ ಯುವ ಪೀಳಿಗೆಗೆ ಭಾಷೆಯ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಾಗಿದೆ. ಆ ಮೂಲಕ ಕನ್ನಡ ಸೊಗಡನ್ನು ಕಲ್ಲು ಬಂಡೆಯ ನಾಡಿನಲ್ಲಿ ಇನ್ನಷ್ಟು ಪಸರಿಸಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಗುಲಬರ್ಗ ವಿವಿ ಯ ಕುಲಸಚಿವ ಸೋಮಲಿಂಗ ಗೆಣ್ಣೂರ, ಕಲಬುರಗಿ ಆಕಾಶವಾಣಿಯ ನಿವೃತ್ತ ನಿರ್ದೇಶಕಿ ಅಂಜನಾ ಚಂದ್ರಕಾಂತ ಯಾತನೂರ, ರಂಗ ಕಲಾವಿದ ಸಂಗಯ್ಯಾ ಹಳ್ಳದಮಠ, ಪರಿಷತ್ತಿನ ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ ಸೇರಿದಂತೆ ಅನೇಕರು ಭಾಗವಹಿಸುವರು.

ಸರಕಾರಿ ಶಾಲೆಯಲ್ಲಿ ಹತ್ತನೇ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮೊ. 98865 60869 ಗೆ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿಕೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here