ಬಿಸಿ ಬಿಸಿ ಸುದ್ದಿ

ಮಳೆಗಾಲದಲ್ಲಿ ಸ್ವಚ್ಛತೆ, ಶುಚಿತ್ವಕ್ಕೆ ಆದ್ಯತೆ ನೀಡಿ

ಕಲಬುರಗಿ: ಮಳೆಗಾಲದಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ, ಶುಚಿ, ರುಚಿ ಆಹಾರ ಸೇವಿಸಿ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಇಂದಿರಾ ಶಕ್ತಿ ಸಲಹೆ ನೀಡಿದರು.

ಶ್ರೀ ಹಿಂಗುಲಾಂಬಿಕ ಶಿಕ್ಷಣ ಸಂಸ್ಥೆಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಮಲ್ಲೇಶಪ್ಪ ಮಿಣಜಿಗಿ ಪ್ರತಿಷ್ಠಾನದ ಆಶ್ರಯದಲ್ಲಿ ಗಾಜಿಪುರದ ಅತ್ತರ್ ಕಾಂಪೌಂಡ್ ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಕ್ರಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆವಹಿಸಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಲಕ್ಷ್ಯವಹಿಸಬೇಕು. ಆರೋಗ್ಯಪೂರ್ಣ ನೆಮ್ಮದಿ ಜೀವನ ನಡೆಸಲು ವೈದ್ಯರ ಸಲಹೆ ಚಾಚೂ ತಪ್ಪದೆ ಪಾಲಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಅಲ್ಲಮಪ್ರಭು ಗುಡ್ಡ ಮಾತನಾಡಿ, ಸದ್ಯ ಕಂಡು ಬರುತ್ತಿರುವ ಅನೇಕ ಕಾಯಿಲೆಗಳಿಗೆ ಆಹಾರ ಮತ್ತು ಜೀವನಶೈಲಿಯೇ ಪ್ರಮುಖ ಕಾರಣವಾಗಿದೆ. ಪೌಷ್ಟಿಕ ಆಹಾರ, ಯೋಗ, ಲಘು ವ್ಯಾಯಾಮ, ಆತಂಕ ರಹಿತ ಜೀವನ ಶೈಲಿಯಿಂದ ಮುನ್ನಡೆದರೆ ನೆಮ್ಮದಿ ಹಾಗೂ ಆರೋಗ್ಯ ಪೂರ್ಣ ಜೀವನ ನಡೆಸಬಹುದಾಗಿದೆ. ಕರಿದ ಪದಾರ್ಥಗಳು, ಜಂಕ್‍ಪುಡ್ ಆಹಾರಗಳ ಮೊರೆ ಹೋಗದೆ ತಾಜಾ ತರಕಾರಿ, ಹಣ್ಣು ಹಂಪಲು ಸೇವಿಸಿ ಸದೃಢ ಆರೋಗ್ಯ ಹೊಂದಬೇಕು. ಡಾ. ಇಂದಿರಾ ಶಕ್ತಿಯವರ ನೇತೃತ್ವದಲ್ಲಿ ನಡೆಯುವ ಪ್ರತಿ ತಿಂಗಳು ಉಚಿತ ಚಿಕಿತ್ಸಾ ಶಿಬಿರದ ಲಾಭ ಪಡೆದುಕೊಂಡು ಆರೋಗ್ಯವಂತರಾಗಿ ಬಾಳಬೇಕು ಎಂದರು.

ಡಾ. ವಿವೇಕಾನಂದ ಪಾಟೀಲ್, ಡಾ. ಸಪ್ನಾ ಕಾಬಾ, ಡಾ. ಓಂಕಾರ ಜೇವೂರ್, ಡಾ. ಸೃಷ್ಟಿ ವೈದ್ಯ, ಡಾ. ಪ್ರಮೋದ, ಡಾ. ಪ್ರಜ್ವಲ ಮಾಲಿಪಾಟೀಲ್, ಡಾ. ಸೊಹೇಲ್ ನದಾಫ್, ಡಾ. ಶೇಖ ಡ್ಯಾನಿಶ್ ಸೇರಿ, ಆಸ್ಪತ್ರೆಯ ಇತರೆ ಸಿಬ್ಬಂದಿ ವರ್ಗದವರು ಹಾಜರಿದರು. ಸುಮಾರು 100ಕ್ಕೂ ಜನರಿಗೆ ತಪಾಸಣೆ ಹಾಗೂ ಔಷದೋಪಚಾರ ನೀಡಲಾಯಿತು.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

4 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

1 month ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago