ಬಿಸಿ ಬಿಸಿ ಸುದ್ದಿ

ಕಲಬುರಗಿ ವಿಭಾಗದ 1,008 ಶಾಲೆಗಳಲ್ಲಿ ಎಲ್.ಕೆ.ಜಿ.-ಯು.ಕೆ.ಜಿ. ತರಗತಿ ಸುಸೂತ್ರವಾಗಿ ನಡೆಯಲಿವೆ; ಡಾ.ಆಕಾಶ ಎಸ್.

ಕಲಬುರಗಿ; ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ರಾಜ್ಯ ಸರ್ಕಾರವು ಪ್ರಸಕ್ತ 2024-25ನೇ ಸಾಲಿನಲ್ಲಿ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ-ಯು.ಕೆ.ಜಿ.) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿದ್ದು, ಅದರಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್.ಕೆ.ಜಿ-ಯು.ಕೆ.ಜಿ. ತರಗತಿಗಳು ಸುಸೂತ್ರವಾಗಿ ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.

ಆರಂಭಿಕ ಹಂತದಿಂದಲೇ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅರ್ಹ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಸರ್ಕಾರ ದಿನಾಂಕ: 11.06.2024ರ ಆದೇಶ ಹೊರಡಿಸಿತ್ತು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್.) ಶಿಕ್ಷಣಕ್ಕೆ ಹಿನ್ನಡೆಯಾಗಬಹುದೆಂದು ಅಂಗನವಾಡಿ ಆರ್ಯಕರ್ತೆಯರು ಹಾಗೂ ಅವರ ಸಂಘವು ಸರ್ಕಾರದ ಆದೇಶಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಕಾರಣ ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಶುವಿಹಾರ ಶಿಕ್ಷಣಕ್ಕಾಗಿ ಪೆÇೀಷಕರಿಂದ ಬಲವಾದ ಬೇಡಿಕೆ ಇರುವ ಕಾರಣ ಈಗಾಗಲೆ ಅಧಿಸೂಚಿಸಿರುವ ಕಲ್ಯಾಣ ಕರ್ನಾಟಕ 1,008 ಸೇರಿ ರಾಜ್ಯದಾದ್ಯಂತ 2,786 ಶಾಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ತರಗತಿ ಆರಂಭಿಸಲು ನಿರ್ಧರಿಸಿದ್ದರಿಂದ, ಎಲ್.ಕೆ.ಜಿ-ಯು.ಕೆ.ಜಿ. ತರಗತಿಗಳು ಅಬಾಧಿತವಾಗಿ ನಡೆಯಲಿವೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷದಿಂದ ಇ.ಸಿ.ಸಿ.ಇ (ಆರಂಭಿಕ ಬಾಲ್ಯದ ಶಿಕ್ಷಣ ಮತ್ತು ಆರೈಕೆ) ಆರಂಭಗೊಂಡ 1,008 ಶಾಲೆಗಳ ಪೈಕಿ ಪ್ರಾಥಮಿಕ ಶಾಲೆಗಳೊಂದಿಗೆ ಹೊಂದಿಕೊಂಡ 321 ಅಂಗನವಾಡಿ ಕೇಂದ್ರಗಳಿದ್ದು, ಇಲ್ಲಿ ಅಂಗನವಾಡಿಗಳ ಸಮನ್ವಯದೊಂದಿಗೆ ಇ.ಸಿ.ಸಿ.ಇ ತರಗತಿಗಳನ್ನು ನಡೆಸಲಾಗುತ್ತದೆ. ಇಲ್ಲಿ ಕನಿಷ್ಠ ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಪರಿಗಣಿಸಲಾಗುವುದು ಮತ್ತು ಇಂತಹ ಕಾರ್ಯಕರ್ತೆಯರಿಗೆ ಇ.ಸಿ.ಸಿ.ಇ ತರಗತಿಗಳ ಕುರಿತು ತರಬೇತಿ ಸಹ ನೀಡಲಾಗುತ್ತದೆ ಎಂದರು.

ಅಸ್ತಿತ್ವದಲ್ಲಿರುವ ಅಂಗನವಾಡಿ ಕಟ್ಟಡವನ್ನು ಎಲ್.ಕೆ.ಜಿ ತರಗತಿ ಕೇಂದ್ರವಾಗಿ ಬಳಸಿಕೊಳ್ಳಲಾಗುವುದು. ಉಳಿದಂತೆ ಶಾಲೆಯಲ್ಲಿ ಯು.ಕೆ.ಜಿ. ಕೇಂದ್ರಗಳು ನಡೆಯಲಿದ್ದು, ಯು.ಕೆ.ಜಿ. ಕೊಠಡಿಯಲ್ಲಿಯೇ ಮಕ್ಕಳಿಗೆ ರೋಗನಿರೋಧಕ ಲಸಿಕೆ ಮತ್ತು ಪೌಷ್ಠಿಕಾಂಶದ ಸೇವೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಪೂರೈಸಬಹುದಾಗಿದೆ. ಶಾಲೆಗಳೊಂದಿಗೆ ಹೊಂದಿಕೊಂಡಿರುವ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಶಿಕ್ಷಣ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಪರಸ್ಪರ ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ನಿರ್ವಹಿಸಬಹುದಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿನ ಪೂರ್ವ ಪ್ರಾಥಮಿಕ ಕಲಿಕಾ ಪ್ರಕ್ರಿಯೆಯನ್ನು ಶಾಲಾ ಮುಖ್ಯೋಪಾಧ್ಯಾಯರ ಜೊತೆಗೆ ಡಬ್ಲ್ಯುಸಿಡಿ ಮೇಲ್ವಿಚಾರಕರು ಮತ್ತು ಎ.ಸಿ.ಡಿ.ಪಿ.ಓ ಅವರು ಜಂಟಿಯಾಗಿ ಮೇಲ್ವಿಚಾರಣೆ ಮಾಡಬಹುದಾಗಿದೆ ಎಂದು ಡಾ.ಆಕಾಶ ಎಸ್. ಅವರು ತಿಳಿಸಿದ್ದಾರೆ.

ಇನ್ನೂ ಶಾಲೆಗಳೊಂದಿಗೆ ಹೊಂದಿಕೊಂಡಿರದ ಅಂಗನವಾಡಿಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಸ್ತಾವನೆಯಂತೆ ಸರ್ಕಾರವು ಪೈಲಟ್ ಆಧಾರದ ಮೇಲೆ ಪ್ರಾರಂಭಕ್ಕೆ ಪರಿಗಣಿಸಲಾಗುವುದು. ಇದಕ್ಕೆ ಮುಂಚಿತವಾಗಿ ಇ.ಸಿ.ಸಿ.ಇ ಕಾರ್ಯಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನೊಳಗೊಂಡಂತೆ ಸರ್ಕಾರ ತಜ್ಞರ ಸಮಿತಿ ರಚಿಸಿ ಅವರಿಂದ ಶಿಫಾರಸ್ಸು ಹಾಗೂ ಮಾರ್ಗಸೂಚಿಗಳನ್ನು ಪಡೆದು ಮುಂದಿನ ಹೆಜ್ಜೆ ಇಡಲಿದೆ.

ತಜ್ಞರ ಸಮಿತಿ ವರದಿ ಸಲ್ಲಿಸುವವರೆಗೆ ಮತ್ತು ಸರ್ಕಾರವು ಇದರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ವಿವಿಧ ಯೋಜನೆಗಳ ಅಡಿಯಲ್ಲಿ ಈಗಾಗಲೇ ಮಂಜೂರಾದ ರಾಜ್ಯಾದ್ಯಂತ 2,786 ಶಾಲೆಗಳನ್ನು ಹೊರತುಪಡಿಸಿ ಇ.ಸಿ.ಸಿ.ಇ ತರಗತಿಗಳನ್ನು ವಿಸ್ತರಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕರ್ತೆಯರ ನೌಕರಿಗೆ ಧಕ್ಕೆ ಇಲ್ಲ: ಸರ್ಕಾರದ ಆಯ್ದ ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ. ತರಗತಿ ಆರಂಭದಿಂದ ಯಾವುದೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ನೌಕರಿಗೆ ಧಕ್ಕೆ ಇಲ್ಲ. ಅಲ್ಲದೆ ಯಾವುದೇ ಅಂಗನವಾಡಿ ಕೇಂದ್ರವನ್ನು ಕೆಳ ದರ್ಜೆಗೆ ಸಹ ಇಳಿಸಲಾಗುವುದಿಲ್ಲ ಎಂದು ಡಾ.ಆಕಾಶ ಎಸ್. ಅವರು ಸ್ಪಷ್ಟಪಡಿಸಿದ್ದಾರೆ.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

1 week ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

2 weeks ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 month ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago