ರೈತ ಪರ ವಿರೋಧಿ ಕಾಂಗ್ರೆಸ್ ಸರ್ಕಾರ

0
61

ಕಲಬುರಗಿ: ರಾಜ್ಯ ಸರ್ಕಾರ ಜನಪರ, ರೈತಪರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಬಸವರಾಜ್ ಪಾಟೀಲ್ ಕಮಲಾಪುರ ಖಂಡಿಸಿದ್ದಾರೆ.

ಕಳೆದ ಬಜೆಟ್ ನಲ್ಲಿ ಪೆÇ್ರೀತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ಬಳಕೆಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಷಯದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಬಾಕಿ ಉಳಿದಿರುವ ಎಂಟು ತಿಂಗಳ ಹಣವನ್ನು ಯಾವಾಗ ಕೊಡುತ್ತಾರೆ ಎಂದು ರೈತರು ಪ್ರಶ್ನಿಸಿದರೆ, ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು. ಹಾಲಿನ ಪೆÇ್ರೀತ್ಸಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ, ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ.

ಭೂ ಸಿರಿ ಯೋಜನೆಯನ್ನು ನಿಲ್ಲಿಸಲಾಗಿದೆ, ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ. ದುಪ್ಪಟ್ಟು ಹಣವನ್ನು ಟ್ರಾನ್ಸ್ ಫಾರ್ಮರ್ ಗಳಿಗೆ ನೀಡುವಂತಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆಮಾಡಲಾಗಿದೆ, ಮುದ್ರಾಂಕ ದರವನ್ನು ಏರಿಸಿದೆ, ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ, ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮ ಹತ್ಯೆಗೆ ಕಾರಣಗಳೇನು? ಸರಕಾರ ತಿಳಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here