ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ಒತ್ತಾಯ

0
100
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಯುವ ಕಾಂಗ್ರೆಸ್ ಮುಖಂಡ ಇಬ್ರಾಹೀಂ ಶೇಖ ಅವರು ಒತ್ತಾಯಿಸಿದ್ದಾರೆ.

ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ‌. ಇವರು ಯಾವುದೇ ಅಧಿಕಾರಕ್ಕೆ ಆಸೆ ಪಡೆದೆ ಸಾಮಾನ್ಯ ಕಾರ್ಯಕರ್ತನಂತೆ ಸೇವೆ ಸಲ್ಲಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ಎಪಿಎಂಸಿ, ಜಿಪಂ, ತಾಪಂ, ಪುರಸಭೆ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ ಎಂದರು.

Contact Your\'s Advertisement; 9902492681

ಇದೀಗ ಹಾಲಿ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಜಾತಿಗಳ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವ ಕಾರ್ಯಕರ ಕುಂದು ಕೊರತೆಗಳಿಗೆ ಸ್ಪಂಧಿಸುತ್ತಾ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಕ್ತಾರ್ ಪಟೇಲ್ ಅವರ ಸೇವೆಯನ್ನು‌ ಪರಿಗಣಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here