ಕಲಬುರಗಿ; ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ “ಆಧುನಿಕ ಕನ್ನಡ ಕಾವ್ಯ ಧಾರೆಗಳು” ಎಂಬ ವಿಷಯದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಶರಣಬಸವ ವಿಶ್ವವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳು ಆದ ಪ್ರೊ. ಬಿ. ಕೆ. ತುಲಸಿಮಾಲ ಅವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಂದು ತಾಂತ್ರಿಕ ಯುಗದಲ್ಲಿ ಜಗತ್ತು ಬದಲಾಗುತ್ತಿದೆ ಇಂತಹ ಸಂದರ್ಭದಲ್ಲಿ ಸಾಹಿತ್ಯವು ಸಹಬದಲಾಗಬೇಕು ಎಂದು ನುಡಿದರು.
ಕಾರ್ಯಕ್ರಮದ ಸ್ಮರಣ ಸಂಚಿಕೆಯನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಎಸ್ ಜಿ. ಡೊಳ್ಳೆಗೌಡರ್ ಅವರು ಬಿಡುಗಡೆ ಮಾಡಿದರು. ಶಾಸ್ತ್ರೀಯ ಅಧ್ಯಯನ ಕೇಂದ್ರ, ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿಯ ನಿರ್ದೇಶಕರು ಆದ ಡಾ. ಬಿ. ಬಿ. ಪೂಜಾರ ಅವರು ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ನಮೋಶಿ ಅವರು ವಹಿಸಿಕೊಂಡು ಇಂದಿನ ಸ್ಪರ್ಧಾಯುಗದಲ್ಲಿ ಹೊಸ ಹೊಸ ಕೋರ್ಸುಗಳನ್ನು ಪ್ರಾರಂಭಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಡಾ. ಅನಿಲಕುಮಾರ ಪಟ್ಟಣ ಅವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರು ಆದ ಡಾ. ರಾಜೇಂದ್ರ ಕೊಂಡಾ, ಉಪ ಪ್ರಾಚಾರ್ಯರು ಆದ ಡಾ. ವೀಣಾ. ಹೆಚ್, ಕನ್ನಡ ವಿಭಾಗದ ಮುಖ್ಯಸ್ಥರು ಆದ ಡಾ. ನಾಗೇಂದ್ರ ಮಸೂತಿ ಅವರು ಸ್ವಾಗತ ಭಾಷಣ ಮಾಡಿದರು, ಡಾ. ಕಲ್ಯಾಣರಾವ ಪಾಟೀಲ ಅವರು ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಕಾಲೇಜಿನ ಭೋದಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕವಿತಾ ಎ. ಎಂ. ಮತ್ತು ದಾನಮ್ಮ ಬಿರಾದಾರ ಅವರು ನಿರ್ವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…