ಬಿಸಿ ಬಿಸಿ ಸುದ್ದಿ

ನಮೋಶಿಗೆ ವಿಪಕ್ಷ ನಾಯಕ ಮಾಡಲು ಹರ್ಷಾನಂದ ಗುತ್ತೇದಾರ ಮನವಿ

ಆಳಂದ; ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತನ ಸದಸ್ಯ ಶಶೀಲ ನಮೋಶಿ ಅವರಿಗೆ ವಿಧಾನ ಪರಿಷತ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುವುದರ ಮೂಲಕ ಪಕ್ಷದ ವರಿಷ್ಠರು ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಪಕ್ಷದ ಬಿಜೆಪಿ ರಾಜ್ಯ ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿರುವ ಅವರು, ನಮೋಶಿ ಅವರು ಜಿಲ್ಲೆಯಲ್ಲಿ ಪಕ್ಷ ಕಟ್ಟಿ ಬೆಳೆಸಿದ ನಾಯಕರಲ್ಲಿ ಒಬ್ಬರಾಗಿದ್ದಾರೆ ಅಲ್ಲದೇ ಈ ಹಿಂದೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಗಳಾಗಿ, ರಾಜ್ಯ ವಕ್ತಾರರಾಗಿ ಪಕ್ಷವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ವಿಧಾನ ಪರಿಷತ್ತಗೆ ನಾಲ್ಕು ಅವಧಿಗೆ ಸದಸ್ಯರಾಗಿ ಆಯ್ಕೆಯಾಗುವುದರ ಮೂಲಕ ಶಿಕ್ಷಕರ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಗುರುತಿಸಿ ಪರಿಹಾರ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಸಂಪರ್ಕ ಹೊಂದಿದ್ದಾರೆ ಅಲ್ಲದೇ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯರ ಜೊತೆ ಉತ್ತಮ ಒಡನಾಟವಿದೆ ಈ ನಿಟ್ಟಿನಲ್ಲಿ ಅವರನ್ನು ವಿಪಕ್ಷ ನಾಯಕರನ್ನಾಗಿ ಮಾಡಿದರೇ ಪಕ್ಷಕ್ಕೆ ಆನೆಬಲ ಬರಲಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಕ್ಷದಲ್ಲಿನ ಅವರ ಹಿರಿತನ, ಸೇವೆ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಈ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

2 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

3 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

4 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

4 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

4 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

4 hours ago