ಕಲಬುರಗಿ; ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಭಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.
ಶುಕ್ರವಾರ ಇಲ್ಲಿನ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು-1995 ರನ್ವಯ ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ದೌರ್ಜನ್ಯ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.
ಪ್ರಕರಣದಲ್ಲಿ ಉದ್ಯೋಗಕ್ಕೆ ಬಾಕಿ ಇರುವ ಕಡತಗಳನ್ನು ಒಂದು ವಾರದಲ್ಲಿ ಪ್ರಸ್ತಾವನೆ ಸಲ್ಲಿಸಬೇಕು. ಪ್ರಸಕ್ತ ಸಾಲಿನಲ್ಲಿ ಪರಿಹಾರಕ್ಕೆ ಅನುದಾನ ಅವಶ್ಯಕತೆ ಇದ್ದಲ್ಲಿ ತಮಗೆ ತಿಳಿಸಿದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡಿ ಅನುದಾನ ತರಿಸಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಮುನಾವರ್ ದೌಲಾ ಅವರಿಗೆ ಡಿ.ಸಿ. ಸೂಚಿಸಿದರು.
ಸರ್ಕಾರದ ಇತ್ತೀಚಿನ ಸುತ್ತೋಲೆ ಪ್ರಕಾರ ಎಸ್.ಸಿ-ಎಸ್.ಟಿ. ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ಇಲಾಖೆಯವರು 45 ದಿನದಲ್ಲಿಯೆ ತನಿಖೆ ಕಾರ್ಯ ಮುಗಿಸಿ ಸಮಾಜ ಕಲ್ಯಾಣ ಇಲಾಖೆಗೆ ವರದಿ ನೀಡಬೇಕಿದೆ. ಅದರಂತೆ ಮೇ ಮಾಹೆಯಲ್ಲಿ ದಾಖಲಾದ ಪ್ರಕರಣಗಳ ವರದಿ ಕೂಡಲೆ ಸಲ್ಲಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ನ್ಯಾಯಾಲಯದಲ್ಲಿಯೂ ಪ್ರಕರಣಗಳ ವಿಚಾರಣೆ ತ್ವರಿತಗತಿಯಲ್ಲಿ ಆಗುವಂತೆ ಸರ್ಕಾರಿ ಅಭಿಯೋಜಕರು ಹೆಚ್ಚು ಮುತುವರ್ಜಿ ವಹಿಸಬೇಕೆಂದರು.
ಆಗಸ್ಟ್ ನಲ್ಲಿ ಅರಿವು ಶಿಬಿರ ಆಯೋಜನೆಗೆ ಸೂಚನೆ: ಸಮಿತಿ ಸದಸ್ಯ ಚೆನ್ನಪ್ಪ ಆರ್.ಸುರಪೂರಕರ್ ಮಾತನಾಡಿ ಹಿಂದಿನ ಸಭೆಯಲ್ಲಿಯೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿತ್ತಾದರು ಇದೂವರೆಗೆ ಆಗಿಲ್ಲ ಎಂದರು. ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ ಸಾರ್ವತ್ರಿಕ ಲೋಕಸಭೆ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಕಿ ವಿಳಂಬವಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿಯೇ ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಅರಿವು ಶಿಬಿರ ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಎಸ್.ಪಿ ಅಕ್ಷಯ್ ಹಾಕೈ, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಎ.ಸಿ.ಪಿ ಬಿಂದುಮಣಿ, ಸಮಿತಿ ಸದಸ್ಯರಾದ ಅನೀಲ ಜಾಧವ, ಮಲ್ಲಪ್ಪ ಹೊಸಮನಿ, ಸಮತಾ ಜೀವನ್ ಸೇರಿದಂತೆ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲೂಕಾ ಹಂತದ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…