ಜೂನ್ 30ಕ್ಕೆ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

0
42

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಮತ್ತು ಕಲಬುರಗಿ ಜಿಲ್ಲಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳಿಗೆ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ಮತ್ತು 2023-24ನೇ ಸಾಲಿನ ಸರ್ವ ಸದ್ಯಸರ ವಾರ್ಷಿಕ ಮಹಾಸಭೆ ಆಯೋಜಿಸಿದೆ.

ಶ್ರೀಶೈಲಂನ ಸಾರಂಗಮಠದ ಪೂಜ್ಯ ಶ್ರೀ ಜಗದ್ಗುರು ಡಾ.ಸಾರಂಗಧರೇಶ್ವರ ದೇಶಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಂಚಾಯತ್ ರಾಜ್, ಐ.ಟಿ-ಬಿ.ಟಿ. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Contact Your\'s Advertisement; 9902492681

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕ ಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಜ್ಯೋತಿ ಬೆಳಗಿಸಲಿದ್ದಾರೆ.

ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷರು ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಮತ್ತು ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಕನೀಜ್ ಫಾತೀಮಾ, ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಇದಲ್ಲದೆ ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ರಾಜ್ಯ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಹ ಭಾಗವಹಿಸಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here