ಕಲಬುರಗಿ; ಅಪರಿಚಿತ ವ್ಯಕ್ತಿಗಳು ಸರ್ಕಾರಿ ಅಧಿಕಾರಿ-ನೌಕರರಿಗೆ ಕರೆ ಮಾಡಿ ತಾನು ಲೋಕಾಯುಕ್ತ ಅಧಿಕಾರಿ ಎಂದು ಬಿಂಬಿಸಿಕೊಂಡು ಹಣ ಕೇಳಿದಲ್ಲಿ ಮೊಬೈಲ್ ನಲ್ಲಿ ಅದನ್ನು ರೆಕಾರ್ಡ್ ಮಾಡಿಕೊಂಡು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ ಎಂದು ಕಲಬುರಗಿ ಲೋಕಾಯುಕ್ತ ಎಸ್.ಪಿ. ಆ್ಯಂಟನಿ ಜಾನ್ ಜೆ.ಕೆ. ತಿಳಿಸಿದ್ದಾರೆ.
ಕೆಲವು ಅಪರಿಚಿತರು 9156540734 ಹಾಗೂ ಇತರೆ ಸಂಖ್ಯೆಗಳಿಂದ ಸರ್ಕಾರಿ ನೌಕರರಿಗೆ ಕರೆ ಮಾಡಿ ತಾವು ಡಿ.ಎಸ್‍ಪಿ, ಲೋಕಾಯುಕ್ತ ಬೆಂಗಳೂರು/ ಕಲಬುರಗಿ/ ಬೀದರ/ ಯಾದಗಿರ ಎಂದು ಹೇಳಿ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ಇದೆ, ತಮ್ಮನ್ನು ಕಾಣುವಂತೆ ನಿಗದಿತ ಸ್ಥಳಕ್ಕೆ ಬರಲು ತಿಳಿಸಿ ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಹಣ ಹಾಕಲು ಇಲ್ಲದಿದ್ದಲ್ಲಿ ಲೋಕಾಯುಕ್ತ ರೇಡ್ ಅಥವಾ ಟ್ರ್ಯಾಪ್ ಮಾಡುತ್ತೇವೆ ಎಂದು ಹೆದರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ.
ಹೀಗಾಗಿ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರು ಈ ರೀತಿಯಾಗಿ ಯಾವುದೇ ಪೋನ್ ಕರೆ ಮಾಡಿ ಹೆದರಿಸುತ್ತಿದ್ದರೆ ಪೊಲೀಸ್ ಠಾಣೆಗೆ ದೂರು ನೀಡುವುದಲ್ಲದೆ ಕಲಬುರಗಿ ಲೋಕಾಯುಕ್ತ ಎಸ್.ಪಿ. -9364062519 ಅಥವಾ ದೂ.ಸಂಖ್ಯೆ 08472-295364ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…