ಬಿಸಿ ಬಿಸಿ ಸುದ್ದಿ

ಸಾಹಿತ್ಯ ಲೋಕದಲ್ಲಿ ಮಿಂಚಿ ಮರೆಯದಾದ ದೃವತಾರೆ ಡಾ.ಕಮಲಾ ಹಂಪನ

ಸುರಪುರ:ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ರಿಕ್ರಿಯೇಷನ್ ಕ್ಲಬ್ ಆವರಣದಲ್ಲಿ ಇತ್ತೀಚಿಗೆ ಇಹಲೋಕ ತ್ಯಜಿಸಿದ ಸಾಹಿತಿಗಳಾದ ಡಾ.ಕಮಲಾ ಹಂಪನಾ,ಕಕ್ಕೇರಾದ ಯುವ ಸಾಹಿತಿ ರಾಘವೇಂದ್ರ ಮುದ್ನೂರ ಹಾಗೂ ಸಾಹಿತ್ಯ ಪ್ರೇಮಿ,ವಕೀಲ ಜಿ.ಎಸ್.ಪಾಟೀಲ್ ಅವರಿಗೆ ನುಡಿ-ನಮನ ಕಾರ್ಯಕ್ರಮ ನಡೆಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಸಾಹಿತಿಗಳು ಹಾಗು ಮುಖಂಡರು ಮಾತನಾಡಿ,ಕನ್ನಡ ಸಾಹಿತ್ಯ ಲೋಕದಲ್ಲಿ ಮಿಂಚಿ ಮರೆಯಾದ ದೃವತಾರೆ ಡಾ. ಕಮಲಾ ಹಂಪನಾ ಅವರು ಜೇನು ಶಾಸ್ತ್ರ,ಪ್ರಾಕೃತ ಶಾಸ್ತ್ರದಲ್ಲಿ ಅಪಾರಜ್ಞಾನವನ್ನು ಹೊಂದಿದ್ದ ಅವರು ಜೈನ ಸಾಹಿತ್ಯ ಪರಂಪರೆಯಲ್ಲಿ ಹಲವಾರು ಸಂಶೋಧನೆಗಳನ್ನು ಮಾಡುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಚಿರಸ್ತಾಯಿ ಯಾಗಿದ್ದಾರೆ.

ಸ್ತ್ರೀ ಸಂವೇದನಾಶೀಲ ಸಾಹಿತಿಯಾಗಿದ್ದ ಅವರು ಜೀವಪರ ಸಾಮಾಜಿಕ ಮೌಲ್ಯಗಳನ್ನು ಬಿತ್ತುವಲ್ಲಿ ಅಪಾರವಾಗಿ ಶ್ರಮಿಸಿದ್ದಾರೆ. ಅವರ ವಿಮರ್ಶೆಗಳು ಕಥಾ ಸಂಕಲನಗಳು ಸೇರಿದಂತೆ ಸಾಹಿತ್ಯದ ಹಲವಾರು ಪ್ರಕಾರಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಹಿತ್ಯ ಲೋಕಕ್ಕೆ ತನ್ನದೇ ಆದ ವಿಭಿನ್ನ ರೀತಿಯ ಕೊಡುಗೆಗಳನ್ನು ಕೊಡುವ ಮೂಲಕ ಚಿರಸ್ಥಾಯಿ ಆಗಿದ್ದಾರೆ. ಮೂಡುಬಿದರೆಯಲ್ಲಿ ಜರುಗಿದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾಗಿದ್ದರು.

ಜಿಎಸ್ ಪಾಟೀಲ್ ನ್ಯಾಯವಾದಿ ಯವರು ಯಾವಾಗಲೂ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ನಿಕಟ ಬಾಂಧವ್ಯವನ್ನು ಹೊಂದುವ ಮೂಲಕ ಸಾಹಿತ್ತಿಕ ಚಟುವಟಿಕೆಗಳಿಗೆ ಬೆನ್ನೆಲುಬಾಗಿದ್ದರು,ಸಮಯ ಪ್ರಜ್ಞೆ ಅವರ ಜೀವಾಳವಾಗಿತ್ತು ಎಂದರು.ಯುವ ಸಾಹಿತಿ ರಾಘವೇಂದ್ರ ಮದ್ನೂರ್ ಅವರು ಸಾಮಾಜಿಕ ಚಿಂತನೆಯನ್ನು ಹೊಂದಿದ್ದ ಅವರು ಕವನ ಸಂಕಲನವನ್ನು ಪ್ರಕಟಿಸುವ ಹಂತದಲ್ಲಿದ್ದರು ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಕೀಳಿದಂತಾಯಿತು ಎಂದರು.

ಕಸಾಪ ತಾಲೂಕ ಅಧ್ಯಕ್ಷ ಶರಣಬಸಪ್ಪ ಯಾಳವಾರ ಅಧ್ಯಕ್ಷತೆ ವಹಿಸಿ ಹಾಗೂ ಸಾಹಿತಿಗಳಾದ ಶ್ರೀನಿವಾಸ ಜಾಲವಾದಿ, ನಬಿಲಾಲ್ ಮಕಾನದಾರ, ಮಲ್ಲಿಕಾರ್ಜುನಯ್ಯ ಸ್ವಾಮಿ ಹಿರೇಮಠ ವಕೀಲರು ಬಸವರಾಜ ಜಮದ್ರಕಾನಿ, ಅನ್ವರ್ ಜಮಾದಾರ, ರಜಾಕ್ ಭಗವಾನ್, ಮಾತನಾಡಿದರು.ಕಾರ್ಯಕ್ರಮದ ಪ್ರಾರಂಭದಲ್ಲಿ ಅಗಲಿದ ಮೂರು ಜನರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.ಉಪನ್ಯಾಸಕ ದೇವು ಹೆಬ್ಬಾಳ ನಿರೂಪಿಸಿದರು.

ಗೌರವ ಕಾರ್ಯದರ್ಶಿ ಎಚ್ ರಾಠೋಡ್ ಸ್ವಾಗತಿಸಿದರು,ಗೌರವ ಕೋಶಾಧ್ಯಕ್ಷ ವೆಂಕಟೇಶ ಪಾಟೀಲ ವಂದಿಸಿದರು. ಪ್ರಮುಖರಾದ ಮಹೇಶ್ ಪಾಟೀಲ್, ಶ್ರೀಶೈಲ್ ಯಂಕಂಚಿ, ಯಲ್ಲಪ್ಪ ಹುಲಿಕಲ್, ವೆಂಕಟೇಶ ಆಲದಾರ್ತಿ, ಪ್ರಕಾಶ ಪಾಟೀಲ, ಗಂಗಾಧರ ರುಮಾಲ್, ಬಸವರಾಜ ಕುಂಬಾರ, ಸಾಹೇಬರೆಡ್ಡಿ ಇಟಗೆ,ಪ್ರಕಾಶ್ ಬಣಗಾರ,ಅನಿಲ್ ಕುಮಾರ್ ಜಿ ಕೆ,ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago