ಬದಲಾಗುವ ಜಗತ್ತಿನಲ್ಲಿ ಸಾಹಿತ್ಯದ ಬದಲಾವಣೆ ಬಹು ಮುಖ್ಯ : ಪೆÇ್ರ. ಬಿ. ಕೆ. ತುಲಸಿಮಾಲ

0
10

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ “ಆಧುನಿಕ ಕನ್ನಡ ಕಾವ್ಯ ಧಾರೆಗಳು” ಎಂಬ ವಿಷಯದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಶರಣಬಸವ ವಿಶ್ವವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಿ. ಕೆ. ತುಲಸಿಮಾಲ ಅವರು ಉದ್ಘಾಟಿಸಿ ಮಾತನಾಡುತ್ತಾ ಇಂದು ತಾಂತ್ರಿಕ ಯುಗದಲ್ಲಿ ಜಗತ್ತು ಬದಲಾಗುತ್ತಿದೆ ಇಂತಹ ಸಂದರ್ಭದಲ್ಲಿ ಸಾಹಿತ್ಯವು ಸಹಬದಲಾಗಬೇಕು ಎಂದು ನುಡಿದರು.

Contact Your\'s Advertisement; 9902492681

ಕಾರ್ಯಕ್ರಮದ ಸ್ಮರಣ ಸಂಚಿಕೆಯನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವರಾದ ಪೆÇ್ರ. ಎಸ್ ಜಿ. ಡೊಳ್ಳೆಗೌಡರ್ ಅವರು ಬಿಡುಗಡೆ ಮಾಡಿದರು.

ಶಾಸ್ತ್ರೀಯ ಅಧ್ಯಯನ ಕೇಂದ್ರ, ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿಯ ನಿರ್ದೇಶಕ ಡಾ. ಬಿ. ಬಿ. ಪೂಜಾರ ಅವರು ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ನಮೋಶಿ ಅವರು ವಹಿಸಿಕೊಂಡು ಇಂದಿನ ಸ್ಪರ್ಧಾಯುಗದಲ್ಲಿ ಹೊಸ ಹೊಸ ಕೋರ್ಸುಗಳನ್ನು ಪ್ರಾರಂಭಿಸಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ. ಅನಿಲಕುಮಾರ ಪಟ್ಟಣ, ಕಾಲೇಜಿನ ಪ್ರಾಚಾರ್ಯ ಡಾ. ರಾಜೇಂದ್ರ ಕೊಂಡಾ, ಉಪ ಪ್ರಾಚಾರ್ಯೆ ಡಾ. ವೀಣಾ. ಹೆಚ್ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಾಗೇಂದ್ರ ಮಸೂತಿ ಅವರು ಸ್ವಾಗತ ಭಾಷಣ ಮಾಡಿದರು, ಡಾ. ಕಲ್ಯಾಣರಾವ ಪಾಟೀಲ ಅವರು ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು. ಕಾಲೇಜಿನ ಭೋದಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕವಿತಾ ಎ. ಎಂ. ಮತ್ತು ದಾನಮ್ಮ ಬಿರಾದಾರ ಅವರು ನಿರ್ವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here