ಕಲಬುರಗಿ: ಅಪ್ರಾಪ್ತ ಬಾಲಿಕಯನ್ನು ಅತ್ಯಾಚಾರ ವೇಸಗಿ ತಿಂಗಳ ಗರ್ಭಿಣಿ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಕಲಬುರಗಿ ನಗರದ ನಿವಾಸಿಯಾಗಿರುವ ರೇಸ್ಮಾ (14) ಹೆಸರು ಬದಲಾಯಿಸಲಾಗಿದೆ) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದ್ದು, ಮುದುವೆಯಾಗಿರುವ ಭಜಿ ಅಂಗಡಿಯ ವ್ಯಾಪಾರಿ ಸರ್ಫರಾಜ್ (30) ಬಾಲಕಿಗೆ ಚುಡಾಯಿಸುತ್ತಿದ್ದ, ಈ ಬಗ್ಗೆ ಬುದ್ಧಿವಾದ ಹೇಳಿದ್ರು ತನ್ನ ಚಾಳಿಯನ್ನು ಮುಂದುವರೆಸಿದ ಎನ್ನಲಾಗಿದೆ.
ಗುರುವಾರ ಬಾಲಕಿಗೆ ತೀವ್ರ ಹೊಟ್ಟೆ ನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡಿರುವ ಪರಿಣಾಮ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ 8 ತಿಂಗಳ ಗರ್ಭಿಣಿ ಎಂದು ಗೊತ್ತಾಗಿದೆ. ಬಾಲಿಕಿಯನ್ನು ಈ ಕುರಿತು ವಿಚಾರಿಸಿದಾಗ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಸರ್ಫರಾಜ್ ಮನೆಗೆ ಬಂದು ಹೆದರಿಸಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರಿನಲ್ಲಿ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಅತ್ಯಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಫೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದೆಂದು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರಾದ ಕನೀಕಾ ಶಿಕ್ರೆವಾಲ್ ಮಾಹಿತಿ ನೀಡಿದ್ದಾರೆ.”
ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ನ್ಯಾಯಕ್ಕಾಗಿ ಒತ್ತಾಯಿಸಿನಗರದ ಕೆ.ಬಿ.ಎನ್ ಆಸ್ಪತ್ರೆ ಎದುರು ದಲಿತ ಸೇನೆಯ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…