ಕಲಬುರಗಿ: ಬಾಹಿರ್ದೇಸೆಗೆ ಹೊಗಿದ್ದ ವ್ಯಕ್ತಿಯನ್ನು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿರುವ ಘಟನೆ ಕೊಂಚಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಸಾಂಗಾಪುರ ತಾಂಡದ ನಿವಾಸಿ ಗೋಪಾಲ್ ಲಿಂಬಾಜಿ ಪವಾರ್ (40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 16 ಜನ ಸೇರಿ ಪತಿಯನ್ನು ಕೊಲೆ ಮಾಡಿರುವುದಾಗಿ ಮೃತಪಟ್ಟ ವ್ಯಕ್ತಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಚಿಂಚೋಳಿ ತಾಲ್ಲೂಕಿನ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.