ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜುಲೈ 2ರಂದು ಬೆಳಗ್ಗೆ 11.30ಕ್ಕೆ ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿಯವರ 145ನೇ ಜನ್ಮದಿನ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯ ತೃತೀಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಚನ ಪಿತಾಮಹ ಡಾ.ಪ.ಗು.ಹಳಕಟ್ಟಿ ಜಯಂತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಆರ್.ಜಿ.ಶಟಗಾರ, ಗೌರವಾಧ್ಯಕ್ಷ ರವೀಂದ್ರ ಶಾಬಾದಿ ತಿಳಿಸಿದರು.
ಅಂದು ಬೆಳಗ್ಗೆ 9ಕ್ಕೆ ನಗರದ ಎಸ್‌ವಿಪಿ ವೃತ್ತದಿಂದ ಪಂಡಿತ ರಂಗ ಮಂದಿರದವರೆಗೆ ಡಾ.ಪ.ಗು.ಹಳಲಕಟ್ಟಿಯವರ ಭವ್ಯ ಭಾವಚಿತ್ರದೊಂದಿದೆ, ವಚನ ಸಾರ ಸಂದೇಶದ ಬಿತ್ತಿ ಚಿತ್ರಗಳು, ವಿವಿಧ ಕಲಾ ತಂಡಗಳೊಂದಿದೆ ಸಾಂಸ್ಕೃತಿಕ ಮೆರವಣಿಗೆ ಆಯೋಜಿಸಲಾಗಿದೆ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೌರವ ಉಪಸ್ಥಿತರಾಗಿ ಪಾಲ್ಗೊಳ್ಳಲಿದ್ದು, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಬಸವರಾಜ ಮತ್ತಿಮೂಡ್, ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ್, ಶಶೀಲ್ ನಮೋಶಿ, ಸುನಿಲ ವಲ್ಲ್ಯಾಪುರೆ, ತಿಪ್ಪಣ್ಣಪ್ಪ ಕಮಕನೂರ, ಡಾ.ಚಂದ್ರಶೇಖರ ಪಾಟೀಲ್ ಹುಮನಾಬಾದ್, ಜಗದೇವ ಗುತ್ತೇದಾರ್, ವಿಶಾಲ ದರ್ಗಿ, ಡಾ.ಮಲ್ಲಿಕಾರ್ಜುನ ವಡ್ಡನಕೇರಿ, ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ, ಗುಪ್ತಲಿಂಗ ಪಾಟೀಲ್ ಸೇರಿದಂತೆ ಅನೇಕರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ನಾಗಪ್ಪ ಜೇನವೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಶಿವಲಿಂಗಪ್ಪ ಅಷ್ಟಗಿ, ವಿನೋದಕುಮಾರ ಜೇನವೇರಿ, ಸಂಗಮೇಶ ಗುಬ್ಬೇವಾಡ, ಹಣಮಂತರಾವ ಪಾಟೀಲ, ಶಿವರಾಜ ಅಂಡಗಿ ಅನೇಕರು ಇದ್ದರು.