ಅಭಾವೀಲಿಂ ಮಹಾಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

0
21

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕು ಘಟಕದ ಅಧ್ಯಕ್ಷ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಆಸಕ್ತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

ಚುನಾವಣಾಧಿಕಾರಿಗಳಾಗಿ ನೇಮಕಗೊಂಡಿರುವ ಶಿವಕುಮಾರ ಮಸ್ಕಿ ಅವರು ಮಾಹಿತಿ ನೀಡಿ.1 ಅಧ್ಯಕ್ಷ ಸ್ಥಾನ,13 ಪುರುಷ ನಿರ್ದೇಶಕರು ಹಾಗೂ 7 ಮಹಿಳಾ ನಿರ್ದೇಶಕರು ಒಟ್ಟು 21 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

Contact Your\'s Advertisement; 9902492681

ಇದುವರೆಗೆ ಅಧ್ಯಕ್ಷ ಸ್ಥಾನಕ್ಕೆ ಒಬ್ಬರು ನಾಮಪತ್ರ ಸಲ್ಲಿಸಿದ್ದು,ಜಗದೀಶ ಪಾಟೀಲ್ ಸೂಗೂರ ನಾಮಪತ್ರ ಸಲ್ಲಿಸಿದ್ದಾರೆ.ಅಲ್ಲದೆ ನಿರ್ದೇಶಕ ಸ್ಥಾನಕ್ಕೆ ಪ್ರಕಾಶ ಹೆಮ್ಮಡಗಿ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ ಜುಲೈ 4ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ,ಈಗಾಗಲೇ ಅನೇಕರು ನಾಮಪತ್ರ ಸಲ್ಲಿಕೆಗೆ ಅರ್ಜಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಚನ್ನಬಸಯ್ಯ ಸ್ವಾಮಿ ಜೇಟಗಿಮಠ ಉಪಸ್ಥಿತರಿದ್ದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಗದೀಶ ಪಾಟೀಲ್ ಸೂಗೂರ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ವಿರೇಶ ನಿಷ್ಠಿ ದೇಶಮುಖ,ಸಿದ್ದನಗೌಡ ಹೆಬ್ಬಾಳ,ಶಿವರುದ್ರ ಉಳ್ಳಿ,ನಿರ್ದೇಶಕ ಸ್ಥಾನದ ಅಭ್ಯರ್ಥಿ ಪ್ರಕಾಶ ಅಂಗಡಿ ಹೆಮ್ಮಡಗಿ,ಸೂಗು ಸಜ್ಜನ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here