ಬಿಸಿ ಬಿಸಿ ಸುದ್ದಿ

ಬರುವ ದಿನಗಳಲ್ಲಿ ಗಡಿನಾಡು ಕನ್ನಡ ಸಮ್ಮೇಳ

ಕಲಬುರಗಿ: ಕನ್ನಡ ನಾಡು-ನುಡಿ ಕಟ್ಟುವಲ್ಲಿ ರಾಜ್ಯ ಸರಕಾರಿ ನೌಕರರ ಪಾತ್ರ ಹಿರಿದು. ಈ ಹಿನ್ನೆಲೆಯಾಗಿ ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಗಡಿನಾಡು ಕನ್ನಡ ಸಮ್ಮೇಳನವನ್ನು ಶೀಘ್ರವೇ ಆಯೋಜಿಸಲಾಗುವುದು. ರಾಜ್ಯದ ಎಲ್ಲಾ ಸರಕಾರಿ ನೌಕರರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಈ ಸಮ್ಮೇಳನಕ್ಕೆ ರೂಪು ರೇಷೆ ಸಿದ್ಧಪಡಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಕನ್ನಡದ ಏಳ್ಗೆಗೆ ಅಭಿಮಾನದ ಅಭಿಯಾನದ ಕನ್ನಡ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೆಲ-ಜಲ ಹಾಗೂ ಭಾಷಾ ಬೆಳವಣಿಗೆಗೆ ಪೂರಕವಾಗಿ ಸರಕಾರಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ ಭಾಷೆ ಬೆಲೆಸುವ ಕಾಯಕ ನಿರಂತರ ನಡೆಯಬೇಕಾಗಿದೆ. ಈ ದಿಸೆಯಲ್ಲಿ ಜನಸಮಾನ್ಯರಲ್ಲಿ ಜಾಗೃತಿ ಮೂಡಿಸುವಂಥ ವಾತಾವರಣ ಸೃಷ್ಠಿಸಬೇಕು. ಆಡಳಿತ ಮತ್ತು ವ್ಯವಹಾರಿಕ ಭಾಷೆಯಾಗಿ ಕನ್ನಡ ಸಮರ್ಥವಾಗಿ ಬಳಸಬೇಕಾಗಿದೆ. ಬಹಳಷ್ಟು ಸರಕಾರಿ ನೌಕರರು ಸಾಹಿತಿಗಳಾಗಿದ್ದವರು. ಇಮದು ಒತ್ತಡದ ಬದುಕಿನಲ್ಲಿ ಸಾಹಿತ್ಯದ ಜತೆಗೆ ಸಾಂಸ್ಕøತಿಕ ವಾತಾವರಣ ಮುಖ್ಯ. ಕಲಬುರಗಿ ಜಿಲ್ಲೆ ಸಾಂಸ್ಕøತಿಕವಾಗಿ ಶ್ರೀಂತಗೊಳಿಸಲು ಕನ್ನಡ ಸಾಹಿತ್ಯ ಪರಿಷತ್ತು ನಿರಂತರ ಶ್ರಮನಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಸಂಸ್ಕøತಿ, ನೆಲ, ಜಲ ಇವುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಶಾಲೆಗೊಂದು ಕನ್ನಡ ಕಾರ್ಯಕ್ರಮ ಆಯೋಜಿಸುವ ಮೂಲಕ ಕನ್ನಡ ಕಟ್ಟುವ ಕಾಯಕದಲ್ಲಿ ಪರಿಷತ್ತು ಇನ್ನಷ್ಟು ತೊಡಗಿಸಿಕೊಳ್ಳುತ್ತದೆ ಎಂದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ನೌಕರರ ಸಂಘ ಇವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ನೌಕರರೇ ಆಗಿದ್ದಾರೆ ಎಂದರು.

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ರಂಗ ಕಲಾವಿದ ಸಂಗಯ್ಯ ಹಳ್ಳದಮಠ, ಸರಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ, ಜಿಲ್ಲಾ ಕಸಾಪ ದ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ ಮಾತನಾಡಿದರು.

ಪ್ರಮುಖರಾದ ಮುಡುಬಿ ಗುಂಡೇರಾವ, ಜಗದೀಶ ಮರಪಳ್ಳಿ, ಕಲ್ಯಾಣಕುಮಾರ ಶೀಲವಂತ, ವಿನೋದಕುಮಾರ ಜೇನವೇರಿ, ಡಾ. ರೆಹಮಾನ್ ಪಟೇಲ್, ಶಕುಂತಲಾ ಪಾಟೀಲ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಗುರುಬಸಪ್ಪ ಸಜ್ಜನಶೆಟ್ಟಿ, ಸಂತೋಷ ಕುಡಳ್ಳಿ, ನಾಗಪ್ಪ ಎಂ ಸಜ್ಜನ, ಎಸ್ ಕೆ ಬಿರಾದಾರ, ಸುರೇಶ ದೇಶಪಾಂಡೆ, ಶಿವಶರಣ ಹಡಪದ, ಎಂ ಎನ್ ಸುಗಂಧಿ, ಸುರೇಶ ದೇಶಪಾಂಡೆ, ವೀರೇಂದ್ರಕುಮಾರ ಕೊಲ್ಲೂರ, ಬಾಬುರಾವ ಪಾಟೀಲ, ಗಣೇಶ ಚಿನ್ನಾಕಾರ, ಮಹೇಶ ಹುಬಳಿ, ತ್ರಿವೇಣಿ ಪವಾರ, ಅಂಬುಜಾ ಶಿವರಾಯನಗೌಡ್ರು, ಜ್ಯೋತಿ ಲಿಂಗಂಪಲ್ಲಿ, ಧರ್ಮರಾಯ ಜವಳಿ, ಮಂಜುನಾಥ ಪಾಂಡವಪುರ, ಮಹಾಂತೇಶ ಕುಂಬಾರ, ರವಿ ಶಹಾಪುರಕರ್, ಪ್ರಭುಲಿಂಗ ಮೂಲಗೆ, ಶರಣಬಸಪ್ಪ ನರೂಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

2 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago