ಬಿಸಿ ಬಿಸಿ ಸುದ್ದಿ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ವೈದ್ಯರು, ಪತ್ರಿಕೆಗಳು, ಲೆಕ್ಕ ಪರಿಶೋಧಕರÀ ಕೊಡುಗೆ ಅನನ್ಯ

ಕಲಬುರಗಿ: ವೈದ್ಯರು ಕಣ್ಣಿಗೆ ಕಾಣಿಸುವ ದೇವರಾಗಿ ರೋಗಿಗಳನ್ನು ರಕ್ಷಿಸುತ್ತಾರೆ. ಪತ್ರಿಕೆಗಳು ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿವೆ. ಲೆಕ್ಕ ಪರಿಶೋಧಕರು ನಿಖರವಾದ ಲೆಕ್ಕಾಚಾರ, ಅಂಕಿ-ಅಂಶಗಳ ಮೂಲಕ ಕೆಲಸ ಮಾಡುತ್ತಾರೆ. ಸದೃಢ ರಾಷ್ಟ್ರ ನಿರ್ಮಾಣಕ್ಕೆ ವೈದ್ಯರು, ಪತ್ರಿಕೆಗಳು ಮತ್ತು ಲೆಕ್ಕ ಪರಿಶೋಧಕರು ತಮ್ಮದೇ ಆದ ಅನನ್ಯವಾದ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ಸಮಾಜ ಸೇವಕ, ನ್ಯಾಯವಾದಿ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ವೈದ್ಯರು, ಪತ್ರಿಕಾ ಮತ್ತು ಲೆಕ್ಕ ಪರಿಶೋಧಕರ ದಿನಾಚರಣೆ’ಯ ಪ್ರಯುಕ್ತ ಮೂರು ಕ್ಷೇತ್ರದ ಸಾಧಕರಿಗೆ ಏರ್ಪಡಿಸಲಾಗಿದ್ದ ಗೌರವ ಸತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ಪತ್ರಕರ್ತ ಚಂದ್ರಕಾಂತ ಹಾವನೂರ ಮಾತನಾಡಿ, ಮಹಾತ್ಮ ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಪತ್ರಿಕೆಗಳನ್ನು ಆರಂಭಿಸಿ ಅದರ ಮೂಲಕ ದೇಶಕ್ಕೆ ಸ್ವಾತಂತ್ರ್ಯ, ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿದರು. ಅಂದರೆ ಪತ್ರಿಕೆಗಳು ನೂರಾರು ವರ್ಷಗಳಿಂದ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿವೆ. ಅವರ ಹೆಜ್ಜೆಯಲ್ಲಿ ಪತ್ರಕರ್ತರು ಸಾಗಬೇಕಾಗಿದೆ. ಸಮಗ್ರ ವಿಷಯಗಳ ಜ್ಞಾನದ ಕಣಜಗಳಾದ ಪತ್ರಿಕೆಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಅಧ್ಯಯನ ಮಾಡುವುದರಿಂದ ನಿಮ್ಮ ವ್ಯಕ್ತಿತ್ವ ವಿಕಾಸವಾಗಿ ಉನ್ನತವಾದ ಸಾಧನೆ ಮಾಡಲು ಪತ್ರಿಕೆಗಳು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ ಎಂದರು.

ಜಿಎಸ್‍ಟಿ ಪ್ರಾಕ್ಟಿಸನರ್ ಅಂಬರೀಶ್ ಬಿರಾದಾರ ಮಾತನಾಡಿ, ಸಿಎ, ತೆರಿಗೆ, ಜಿಎಸ್‍ಟಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಗದ ಅಧ್ಯಕ್ಷ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ, ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಟುಂಬ ವೈದ್ಯ ಡಾ.ವಿ.ಬಿ.ಮಠಪತಿ, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪರಮೇಶ್ವರ ಬಿ.ದೇಸಾಯಿ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಚಂದ್ರು ಕೊಡದೂರ, ಸಂಸ್ಥೆಯ ಶಿಕ್ಷಕರಾದ ಪ್ರಿಯಾಂಕಾ ಉಜಳಂಬಿ, ನಿಲೊಫರ್ ಶೇಖ್, ಐಶ್ವರ್ಯ ಬಿರಾದಾರ, ಪೂಜಾ ಜಮಾದಾರ, ಪೂಜಾ ಹೂಗಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago