ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

0
16

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ – 2024ರ ಅಂಗವಾಗಿ “ಮಾಧ್ಯಮ – ಸಾಮಾಜಿಕ ಜಾಲತಾಣ” ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಫೇಕ್ ನ್ಯೂಸ್‍ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಫೇಕ್ ನ್ಯೂಸ್‍ಗಳ ಪತ್ತೆ ಮತ್ತು ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ ಈಚಿಛಿಣ ಛಿheಛಿಞ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದರು.

Contact Your\'s Advertisement; 9902492681

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿಗಳು ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿದ್ದು, ಪತ್ರಕರ್ತರಿಗೆ ನೀಡುತ್ತಿದ್ದ 10 ಸಾವಿರ ರೂ.ಗಳ ಮಾಸಾಶನವನ್ನು 12 ಸಾವಿರಕ್ಕೆ ಹೆಚ್ಚಿಸಿದ್ದಾರೆ. ಮೂರು ದಶಕಗಳ ಬೇಡಿಕೆಯಾದ ಕಾರ್ಯನಿರತ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು, ಆದಷ್ಟು ಶೀಘ್ರದಲ್ಲಿ ಜಾರಿಗೊಳಿಸಬೇಕೆಂದು ಹಾಗೂ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರು ಮಾಡುವಂತೆ ಮನವಿ ಮಾಡಿದರು.

ಪ್ರೆಸ್‍ಕ್ಲಬ್ ಆಫ್ ಬೆಂಗಳೂರಿನ ಅಧ್ಯಕ್ಷರಾದ ಕೆ.ಆರ್. ಶ್ರೀಧರ್ ಅವರು ಮಾತನಾಡಿ ಮುಖ್ಯ ಮಂತ್ರಿಗಳು ಪತ್ರಕರ್ತರ ಕ್ಷೇಮಾಭಿವೃದ್ದಿಯಲ್ಲಿ ಸ್ಪಂದಿಸಿದ್ದಾರೆ. ಹಿರಿಯ ಪತ್ರಕರ್ತರ ಮಾಸಿಕ ಪಿಂಚಣಿ ವಿಚಾರದಲ್ಲಿ ನ್ಯೂನತೆಗಳಿದ್ದು ಜಟಿಲ ಸಮಸ್ಯೆಯನ್ನು ನಿವಾರಣೆ ಮಾಡಿದ್ದಾರೆ. ಮಾಸಾಶನಕ್ಕೆ ಸಂಬಂಧಿಸಿದಂತೆ ಹೊಸ ಸಮಿತಿ ರಚನೆ ಆಗಿದೆ. ಪ್ರೆಸ್‍ಕ್ಲಬ್‍ನ ಅಡುಗೆ ಕೋಣೆಯು ಶಿಥಿಲಾವಸ್ಥೆಯಲ್ಲಿದ್ದು 1ಕೋಟಿ 40 ಲಕ್ಷ ಅನುದಾನ ಬಿಡುಗಡೆ ಮಾಡಿದರು. ಆಧುನಿಕ ಅಡುಗೆ ಕೋಣೆಯು ಸಿದ್ದವಾಗಿದೆ. ಮುಖ್ಯಮಂತ್ರಿಗಳು ಪ್ರೆಸ್‍ಕ್ಲಬ್‍ನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.

ನಮ್ಮ ರಾಜ್ಯದಲ್ಲಿ ಹಲವಾರು ಪತ್ರಕರ್ತರ ಆರೋಗ್ಯವು ಉತ್ತಮವಾಗಿಲ್ಲ. 5 ಕೋಟಿ ರೂ ಆರೋಗ್ಯನಿಧಿ ಯೋಜನೆಗೆ ಅನುದಾನ ನೀಡಿ ಇದಕ್ಕಾಗಿ ಸಮಿತಿ ರಚನೆ ಮಾಡಿದರೆ ಪತ್ರಕರ್ತರು ಉತ್ತಮವಾದ ಆರೋಗ್ಯ ಪಡೆಯಲು ಸಹಾಯವಾಗುತ್ತದೆ ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.

ಹಿರಿಯ ಪತ್ರಕರ್ತರಾದ ಕೃಷ್ಣ ಪ್ರಸಾದ್ ಮಾತನಾಡಿ, ಧರ್ಮ ಪ್ರಚಾರಕ್ಕಾಗಿ ಈ ನಾಡಿಗೆ ಬಂದಿದ್ದ ಹರ್ಮನ್ ಫೆಡ್ರಿಕ್ ಮೋಗ್ಲಿಂಗ್ ಜುಲೈ 01, 1843 ರಂದು ಪ್ರಾರಂಭಿಸಿದ ಕನ್ನಡದ ಮೊಟ್ಟ ಮೊದಲ ‘ಮಂಗಳೂರು ಸಮಾಚಾರ ಪತ್ರಿಕೆ’ ಯು ನಾಲ್ಕು ಪುಟದಿಂದ ಪ್ರಾರಂಭವಾಗಿದ್ದು, ಸುಳ್ಳು ಸುದ್ದಿ ಪ್ರಕಟಿಸಬಾರದು ಎಂಬ ಉದ್ದೇಶವನ್ನು ಹೊಂದಿತ್ತು. 179 ವರ್ಷಗಳಲ್ಲಿ ಕನ್ನಡ ಪತ್ರಿಕೆಗಳು ಬದಲಾಗಿವೆ. ಈಗ ಸಾಮಜಿಕ ಜಾಲ ತಾಣ, ಕೃತಕ ಬುದ್ದಿಮತ್ತೆ ಹುಟ್ಟಿಕೊಂಡಿದ್ದು, ಕನ್ನಡ ಪತ್ರಿಕೋದ್ಯಮ ಚಿಂತಾಜನಕ ಸ್ಥಿತಿಯಲ್ಲಿದೆ. ಪತ್ರಕರ್ತರು ಜನರಿಗೆ ಸಕಾರತ್ಮಕ ಸುದ್ದಿಗಳನ್ನು ತಲುಪಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಳಾದ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here