ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ ರೂ.15 ಕೋಟಿ ಖರ್ಚು ಮಾಡಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್‍ಸಿಂಗ್ ತಿಳಿಸಿದರು.

ಕೆಕೆಆರ್ ಡಿಬಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯನ್ನು ಕೇವಲ ಐದಾರು ತಿಂಗಳಲ್ಲಿ ಅಮೂಲಾಗ್ರವಾಗಿ ಬದಲಾಯಿಸುವುದು ಅಸಾಧ್ಯದ ಮಾತಾಗುತ್ತದೆ. ಈ ನಿಟ್ಟಿನಲ್ಲಿ ದೀರ್ಘಕಾಲಿಕ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ. ಹಾಗಾಗಿ, ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ತಜ್ಞರ ವರದಿಗೆ ಅನುಗುಣವಾಗಿ ಎಲ್ಲ ಅಂಶಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಏಳು ಜಿಲ್ಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಪರಾಮರ್ಶೆ ನಡೆಸಲು ಮುಂದಿನ ಎರಡು ತಿಂಗಳೊಳಗೆ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಮಂಡಳಿ ವತಿಯಿಂದ ಅಕ್ಷರ ಆವಿಷ್ಕಾರ ಯೋಜನೆಯ ಅನುಷ್ಠಾನಕ್ಕಾಗಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣಕ್ಕಾಗಿ ಶೇ.25ರಷ್ಟು ಅನುದಾನ ಖರ್ಚು ಮಾಡಲಾಗುತ್ತಿದೆ. ಈ ಎಲ್ಲ ನಿಟ್ಟಿನಲ್ಲಿ ಶಿಕ್ಷಣ ತಜ್ಞರ ಮಾರ್ಗದರ್ಶನ ಫಲ ನೀಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೆಕೆಆರ್ ಡಿಬಿ ಸಹಭಾಗಿತ್ವದಲ್ಲಿ ‘ಕಲ್ಯಾಣ ಪಥ’ ಯೋಜನೆ ಅಡಿ ಈ ಭಾಗದ ಎಲ್ಲ ಜಿಲ್ಲೆಗಳಲ್ಲಿ ಗುಣಮಟ್ಟದ 1000 ಕಿ.ಮೀ ರಸ್ತೆ ನಿರ್ಮಾಣಕ್ಕಾಗಿ ಒಟ್ಟು ರೂ.1000 ಕೋಟಿ ಖರ್ಚು ಮಾಡಲಾಗುತ್ತಿದೆ. ರಾಜ್ಯ ಮುಂಗಡ ಪತ್ರದಲ್ಲಿ ಘೋಷಿಸಿರುವಂತೆ ಈ ಪೈಕಿ ರಾಜ್ಯ ಸರಕಾರ ರೂ.665 ಕೋಟಿ ಹಾಗೂ ಕೆಕೆಆರ್ ಡಿಬಿ ರೂ.335 ಕೋಟಿ ಖರ್ಚು ಮಾಡಲಿವೆ ಎಂದರು.

ಆರೋಗ್ಯ ಆವಿಷ್ಕಾರ ಯೋಜನೆ ಅಡಿಯಲ್ಲಿ ಮಂಡಳಿ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪ್ರತಿ ಕೇಂದ್ರಕ್ಕೆ ಕೆಕೆಆರ್ ಡಿಬಿ ವತಿಯಿಂದ ರೂ. 1 ಕೋಟಿ 49 ಲಕ್ಷ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ, ಕಲಬುರಗಿ ನಗರದಲ್ಲಿ ಕಿದ್ವಾಯಿ ಇನ್ಸ್‌ಟಿಟ್ಯೂಟ್ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯೊಂದಿಗೆ ಕೆಕೆಆರ್‍ಡಿಬಿ ಸಹ ಅಗತ್ಯ ಅನುದಾನ ಒದಗಿಸಲಿದೆ ಎಂದು ಮಾಹಿತಿ ನೀಡಿದರು.

ಮೇಲಾಗಿ, ಕೆಕೆಆರ್ ಡಿಬಿ ವತಿಯಿಂದ ಪ್ರತಿ ತಿಂಗಳು ಮಂಡಳಿ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಹೆಚ್ಚಾಗಿ ಕಾಡುವ ಸ್ತನ ಕ್ಯಾನ್ಸರ್, ಗರ್ಭಕೋಶದ ಕಂಠದ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಈ ಶಿಬಿರ ಹೆಚ್ಚು ಪ್ರಯೋಜನಕ್ಕೆ ಬರಲಿದೆ ಎಂದು ಡಾ.ಅಜಯ್‍ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಕಲ್ಯಾಣದ ಜಿಲ್ಲೆಗಳಲ್ಲಿ ಒಟ್ಟು 187 ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರತಿ ಶಾಲೆಗೆ ಮೂರರಿಂದ ಐದು ಎಕರೆ ಸರಕಾರಿ ಭೂಮಿಯ ಅಗತ್ಯವಿದೆ. ಭೂಮಿ ಲಭ್ಯವಾಗುತ್ತಿದ್ದಂತೆಯೇ ತಲಾ ಮೂರರಿಂದ ಐದು ಕೋಟಿ ಅಂದಾಜು ವೆಚ್ಚದಲ್ಲಿ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರಲ್ಲದೆ ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಒದಗಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೆಕೆಆರ್ ಡಿಬಿ ಕಾರ್ಯದರ್ಶಿ ಎಂ.ಸುಂದರೇಶ್ ಬಾಬು, ಉಪ ಕಾರ್ಯದರ್ಶಿ ಎಂ.ಕೆ.ಪ್ರಮೀಳಾ ಇದ್ದರು.

ಜು.15ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ: ಪ್ರಸಕ್ತ ಸಾಲಿನಲ್ಲಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜುಲೈ 15ರೊಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲ 41 ಶಾಸಕರಿಗೆ ಮನವಿ ಮಾಡಲಾಗಿದೆ ಎಂದು ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯ್‍ಸಿಂಗ್ ತಿಳಿಸಿದರು.

ಜು.1ರಂದು ಕಲಬುರಗಿಯಲ್ಲಿ ನಡೆದ ಕೆಕೆಆರ್ ಡಿಬಿ
ಪ್ರಥಮ ವಾರ್ಷಿಕ ಸಭೆಯಲ್ಲಿ ಈ ಕುರಿತಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದ ಅವರು, ಮಂಡಳಿಯ ಪ್ರಸಕ್ತ ಸಾಲಿನ ರೂ.5000 ಕೋಟಿ ಅನುದಾನಕ್ಕೆ ಪೂರಕವಾಗಿ ಕ್ರಿಯಾ ಯೋಜನೆ ಪಡೆಯಲಾಗುತ್ತಿದೆ ಎಂದರು.

ಹಂತಹಂತವಾಗಿ ಬಯೋಮೆಟ್ರಿಕ್ ಹಾಜರಾತಿ: ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾಗಿಯ ಮೇಲೆ ತೀವ್ರ ನಿಗಾ ಇಡಲು ಹಂತ ಹಂತವಾಗಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಎಸ್. ತಿಳಿಸಿದರು.

ಈಗಾಗಲೇ ಪ್ರಾಯೋಗಿಕವಾಗಿ ಬೀದರ್ ಜಿಲ್ಲೆಯ ಔರಾದ್, ಭಾಲ್ಕಿ ತಾಲೂಕಿನಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಮೇಲಾಗಿ, ಈ ಕುರಿತು ರಾಜ್ಯ ಸರಕಾರದ ಗಮನಕ್ಕೂ ತರಲಾಗಿದ್ದು ಉತ್ತಮ ಸ್ಪಂದನೆ ದೊರೆತಿದೆ. ಹೀಗಾಗಿ, ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸರಕಾರಿ ಶಾಲೆಗಳಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ಇದರ ಜೊತೆಗೆ, ನಾಲ್ಕು, ಐದು, ಏಳು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ‘ಓದು ಕರ್ನಾಟಕ’ ಎಂಬ ವಿನೂತನ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕಲಿಕೆ ವ್ಯವಸ್ಥೆ ದೊರೆತಾಗ ಒಂಬತ್ತು ಮತ್ತು 10ನೇ ತರಗತಿ ತಲುಪುವ ಹೊತ್ತಿಗೆ ವಿದ್ಯಾರ್ಥಿಗಳಲ್ಲಿ ಕಲಿಕೆಯ ಕುರಿತಾಗಿ ಆಸಕ್ತಿ ಹೆಚ್ಚಾಗಲು ಅನುಕೂಲವಾಗುತ್ತದೆ ಎಂದು ಹೇಳಿದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

3 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

19 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago