ಬಿಸಿ ಬಿಸಿ ಸುದ್ದಿ

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಸತಿ ನಿಲಯ ಹಳೇಯದಾಗಿದ್ದು, ಪ್ರಸ್ತುತ 35 ನಿಲಯಾರ್ಥಿಗಳಿದ್ದಾರೆ. ಇದನ್ನು ಕೆಡವಿ ಇಲ್ಲಿ ತಲಾ 50 ಬಾಲಕ-ಬಾಲಕೀಯರ ಪ್ರತ್ಯೇಕ ವಾಸಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ವಸತಿ ನಿಲಯ ನಿರ್ಮಿಸಬೇಕಿದೆ. ಅಕ್ಕಪಕ್ಕದ ಕ್ರೀಡಾಂಗಣದ ಸ್ಥಳ ಬಳಸಿಕೊಂಡು ಸಕಲ‌ ಸೌಕರ್ಯ ಒಳಗೊಂಡ ಕಟ್ಟಡ‌ ನಿರ್ಮಿಸಬೇಕಿದ್ದು, ನಿವೇಶನದ ಸರ್ವೆ ಕಾರ್ಯ ಬುಧವಾರದಿಂದಲೆ ಆರಂಭಿಸುವಂತೆ ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಅಭಿಯಂತ ಸೌರಭ್ ಅವರಿಗೆ ಡಿ.ಸಿ. ಅವರು ಸೂಚನೆ ನೀಡಿದರು.

ವಸತಿ ನಿಲಯದಲ್ಲಿ ಅಡುಗೆ ಕೋಣೆ, ಊಟದ ಕೋಣೆ, ವಾಸ ಸ್ಥಾನ, ಕ್ರೀಡಾ ಸಾಮಗ್ರಿ ಇಟ್ಟುಕೊಳ್ಳಲು ಪ್ರತ್ಯೇಕ ಸ್ಥಳ, ಶೌಚಾಲಯ ಹೀಗೆ ಸಕಲ ಸೌಕರ್ಯ ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ಸಲ್ಲಿಸುವಂತೆ ಡಿ.ಸಿ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಐವಾನ್-ಎ-ಶಾಹಿ ಅತಿಥಿಗೃಹಕ್ಕೆ‌ ಭೇಟಿ‌ ನೀಡಿದ ಡಿ.ಸಿ. ಅವರು, ಆವರಣದಲ್ಲಿನ ನೂತನ ಅತಿಥಿಗೃಹಗಳ ಕಟ್ಟಡ ದುರಸ್ತಿ, ಅನೆಕ್ಸ್ ಕಟ್ಟಡದಲ್ಲಿ ಎರಡನೇ ಮಹಡಿ ನಿರ್ಮಾಣ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದಕ್ಕು ಮುನ್ನ ಜಗತ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು, ಪೀಠೋಪಕರಣಗಳನ್ನು ಬದಲಾಯಿಸುವಂತೆ ಸೂಚಿಸಿದರು.

ರಂಗಮಂದಿರ ದುರಸ್ತಿಗೆ ಪಟ್ಟಿ ಕೊಡಿ: ನಂತರ ಡಾ.ಎಸ್.ಎಂ.ಪಂಡಿತ್ ರಂಗಮಂದಿರಕ್ಕೆ ಡಿ.ಸಿ. ಅವರು ಭೇಟಿ ನೀಡಿ ಕಟ್ಟಡ ವೀಕ್ಷಿಸಿದರು. ಅಲ್ಲಿದ್ದ ಮಾಜಿ ರಂಗಾಯಣ ನಿರ್ದೇಶಕ ಪ್ರೊ.ಆರ್.ಕೆ.ಹುಡಗಿ, ರವೀಂದ್ರ ಶಾಬಾದಿ ಅವರು ರಂಗಮಂದಿರದಲ್ಲಿ ಪ್ರತಿನಿತ್ಯ ಸರ್ಕಾರಿ-ಖಾಸಗಿ ಕಾರ್ಯಕ್ರಮ ನಡೆಯುತ್ತವೆ, ಆದರೆ ಸೌಂಡ್ ಸಿಸ್ಟಮ್ ವ್ಯವಸ್ಥೆ ಇಲ್ಲದ ಕಾರಣ ಹೊರಗಿನಿಂದ ಬಾಡಿಗೆ ಪಡೆದು ತರಬೇಕಾಗಿದೆ.‌ ಎ.ಸಿ. ಕಾರ್ಯನಿರ್ವಹಿಸುತ್ತಿಲ್ಲ, ಕಿಟಕಿ ಗಾಜು ಒಡೆದಿವೆ, ಸೀಟ್ ಹರಿದಿವೆ, ದುರಸ್ತಿ ಕಂಡಿಲ್ಲ ಎಂಬಿತ್ಯಾದಿ ವಿಷಯಗಳನ್ನು ಡಿ.ಸಿ ಅವರ ಗಮನಕ್ಕೆ ತಂದರು.

ಏನೇನು ದುರಸ್ತಿ ಮಾಡಬೇಕು ಅದೆಲ್ಲದರ ಬಗ್ಗೆ ಇಂದೇ ಪಟ್ಟಿ ಕೊಡಿ ದುರಸ್ತಿ ಮಾಡಲಾಗುವುದು ಎಂದು ರಂಗಮಂದಿರ ನಿರ್ವಹಣಾ ಸಮಿತಿಯ ಅಧ್ಯಕ್ಷೆಯಾಗಿರುವ ಡಿ.ಸಿ. ಅವರು ತಿಳಿಸಿದರು. ಡಾ. ಫ.ಗು. ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ ಇದಕ್ಕೆ ಸಾಕ್ಷಿಯಾದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago