ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ ಮಂಗಳವಾರ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಓ ಜಿಲ್ಲಾಧ್ಯಕ್ಷರಾದ ಜಗನ್ನಾಥ ಎಸ್. ಹೆಚ್, ಇಂದಿನ ದಿನಗಳಲ್ಲಿ ಎಲ್ಲಾ ಸೇವೆಗಳನ್ನು ಸರ್ಕಾರಗಳು ಡಿಜಿಟಲೀಕರಣಗೊಳಿಸಿದ್ದು, ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಿಗೆ, ಯುವಕರು ಆನ್‍ಲೈನ್ ಅರ್ಜಿ ನಮೂನೆ ಮತ್ತು ಸಾರ್ವಜನಿಕ ಸೇವಾ ಪರೀಕ್ಷೆಗಳಿಗೆ, ಆನ್‍ಲೈನ್ ವಹಿವಾಟಿಗೆ ಬೀದಿ ವ್ಯಾಪಾರಿಗಳು ಮತ್ತು ವೈದ್ಯಕೀಯ ಸೇವೆ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಸಾಮಾನ್ಯ ಜನರು ಸೇರಿದಂತೆ ಪ್ರತಿಯೊಂದು ವಿಭಾಗದ ಜನರು ಅಂತರ್ಜಾಲದ ಮೇಲೆ ಅವಲಂಬಿತರಾಗಿದ್ದಾರೆ.
ಇಂದು ಇಂಟರ್ನೆಟ್ ಮೊಬೈಲ್ ಡೇಟಾ ಮತ್ತು ರೀಚಾರ್ಜ್ ಜನರ ಜೀವನದ ಅನಿವಾರ್ಯ ಭಾಗವಾಗಿದೆ. ಮತ್ತೊಂದೆಡೆ, ನಿರುದ್ಯೋಗ ಮತ್ತು ಹಣದುಬ್ಬರದಿಂದಾಗಿ ದಿನಕ್ಕೆ ಎರಡು ಹೊತ್ತಿನ ಊಟಕ್ಕೂ ಜನಸಾಮಾನ್ಯರು ಪರದಾಡುವಂತಾಗಿದೆ. ಹಾಗಾಗಿ ಮೊಬೈಲ್ ಡೇಟಾ ಇಂದು ಎಷ್ಟು ಅವಶ್ಯಕವಾಗಿದೆ ಎಂದರೆ ಮೊಬೈಲ್ ರೀಚಾರ್ಜ್‍ಗಾಗಿ ಹಣವನ್ನು ಉಳಿಸಲು ಹಸಿವಿನಿಂದ ಇರುವ ಅನಿವಾರ್ಯತೆಗೆ ಅವರು ಒಳಗಾಗಿದ್ದಾರೆ.
ಸಾಮಾನ್ಯ ಜನರ ಇಂತಹ ಶೋಚನೀಯ ಮತ್ತು ಅಸಹಾಯಕ ಪರಿಸ್ಥಿತಿಯಲ್ಲಿ, ಖಾಸಗಿ ಟೆಲಿಕಾಂ ಕಂಪನಿಗಳು ನಿರಂಕುಶವಾಗಿ ಮತ್ತು ಅಮಾನವೀಯವಾಗಿ ಪ್ರಿಪೇಯ್ಡ್ ಮೊಬೈಲ್ ಮತ್ತು ಡೇಟಾ ಸೇವೆಗಳ ಶುಲ್ಕವನ್ನು ಮತ್ತೊಮ್ಮೆ ಹೆಚ್ಚಿಸಿವೆ. ಕರೋನಾ ಅವಧಿಯಿಂದಲೂ, ಸಣ್ಣ ಪ್ರಮಾಣದ ಕೈಗಾರಿಕೆಗಳು ಮತ್ತು ವ್ಯವಹಾರಗಳು ಭಾರೀ ನಷ್ಟವನ್ನು ಎದುರಿಸುತ್ತಿರುವಾಗ, ಈ ಖಾಸಗಿ ಟೆಲಿಕಾಂ ಕಂಪನಿಗಳು ಸುಂಕವನ್ನು ಹೆಚ್ಚಿಸುವ ಮತ್ತು ಗರಿಷ್ಠ ಲಾಭವನ್ನು ಪಡೆಯಲು ಎಲ್ಲಾ ಅವಕಾಶಗಳನ್ನು ಹುಡುಕುತ್ತಿವೆ.
ಇಂತಹ ಸಂದರ್ಭದಲ್ಲಿ ಮೊಬೈಲ್ ಗ್ರಾಹಕರ ಹಿತದೃಷ್ಟಿಯಿಂದ ನ್ಯಾಯಯುತ ಮತ್ತು ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಖಾಸಗಿ ಕಂಪನಿಗಳನ್ನು ನಿಯಂತ್ರಿಸುವ ಬದಲು, ಮೂಕ ಪ್ರೇಕ್ಷಕನಾಗಿ ಉಳಿದಿರುವುದು ವಿμÁದನೀಯ ಸಂಗತಿಯಾಗಿದೆ.
ಈ ಕೂಡಲೇ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು ಟ್ರಾಯ್ ತಕ್ಷಣವೇ ಮಧ್ಯಪ್ರವೇಶಿಸಿ, ರೀಚಾರ್ಜ್‍ಗಳ ಮತ್ತು ಡೇಟಾ ಶುಲ್ಕಗಳಲ್ಲಿನ ಅನ್ಯಾಯಯುತವಾದ ಹೆಚ್ಚಳವನ್ನು ಸಂಪೂರ್ಣವಾಗಿ ಹಿಂಪಡೆಯಲು ಖಾಸಗಿ ಟೆಲಿಕಾಂ ಕಂಪನಿಗಳ ಮೇಲೆ ಒತ್ತಡ ಹೇರಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ.
ಅದೇರೀತಿ ಸಾರ್ವಜನಿಕ ವಲಯದ ಟೆಲಿಕಾಂ ಕಂಪನಿ ಃSಓಐ ಅನ್ನು ಪುನರುಜ್ಜೀವನಗೊಳಿಸಲು ಮತ್ತು ಸಂವಹನ ಸೇವೆಗಳು ಕೈಗೆಟುಕುವ ದರದಲ್ಲಿ ದೊರೆಯುವಂತಾಗಲು ಕೇಂದ್ರಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಕಾರ್ಯದರ್ಶಿ ರಮೇಶ್ ದೇವಕರ್ ಪ್ರತಿಭಟನೆ ನೇತೃತ್ವ ವಹಿಸಿದರು. ಪ್ರತಿಭಟನೆಯಲ್ಲಿ ದೇವರಾಜ್ ಮಿರಲ್ಕರ್ ನೀಲಕಂಠ ಹುಲಿ, ರಾಕೇಶ್ ಪೆÇೀತನ್ಕರ್ ಮಲ್ಲು ದೊರೆ ಇರ್ಫಾನ್ ಶೇಕ್, ಅಬ್ದುಲ್ ರೆಹಮಾನ್, ಸಲೀಂ, ಶಿವಶರಣ, ನಾಗರಾಜ್ ಮಾನೆ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…