ಬಿಸಿ ಬಿಸಿ ಸುದ್ದಿ

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ ಬಹು ದೊಡ್ಡ ಮಹತ್ವದ ಕಾರ್ಯವನ್ನು ಮಾಡುವ ಮೂಲಕ ಎತ್ತರದ ಸಾಧನೆ ಮಾಡಿದ್ದಾರೆ. ಅವರ ಪ್ರೇರಣೆಯಿಂದ ಅವರ ಕಾರ್ಯವನ್ನು ಸ್ಮರಿಸುವುದರ ಜತೆಗೆ ಆ ಕೆಲಸವನ್ನು ಇಂದು ನಾವುಗಳು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಆ ಮೂಲಕ ವಚನ ಸಾಹಿತ್ಯದ ತಿರುಳನ್ನು ಇಂದಿನ ಹೊಸ ಪೀಳಿಗೆಗೆ ಮುಟ್ಟಿಸಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಮಾತನಾಡಿದ ಅವರು, ನಶಿಸಿ ಹೋಗುತ್ತಿದ್ದ ವಚನ ಸಾಹಿತ್ಯದ ಮೂಲ ಪ್ರತಿಗಳಾದ ಅಮೂಲ್ಯವಾದ ತಾಳೆಗರಿಗಳನ್ನು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ತೆರಳಿ, ಹುಡುಕಿ, ಸಂಗ್ರಹಿಸಿ, ಅವುಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅವುಗಳನ್ನು ಗ್ರಂಥ ರೂಪದಲ್ಲಿ ಎಲ್ಲರೂ ಓದಲು ಅನುಕೂಲ ಮಾಡಿಕೊಟ್ಟ ಹಳಕಟ್ಟಿಯವರ ಶ್ರಮ ಅನುಕರಣಿಯವಾದುದು ಎಂದು ಹೇಳಿದರು.

ಪ್ರಾಧ್ಯಾಪಕ ಡಾ. ರವೀಂದ್ರ ಕುಂಬಾರ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಮುಖರಾದ ಶಕುಂತಲಾ ಪಾಟೀಲ, ಜ್ಯೋತಿ ಪಾಟೀಲ, ಧರ್ಮರಾಜ ಜವಳಿ, ರಮೇಶ ಡಿ. ಬಡಿಗೇರ, ರಾಜೇಂದ್ರ ಮಾಡಬೂಳ, ಅಚಲರಾಜ ಅಂಡಗಿ, ಚಂದ್ರಕಾಂತ ಸೂರನ್, ಗಣೇಶ ಚಿನ್ನಾಕಾರ, ರೇವಣಸಿದ್ದಪ್ಪ ಜೀವಣಗಿ, ಸಂತೋಷ ಕುಡಳ್ಳಿ ಕಾಳಗಿ, ಶಾಮಸುಮದರ ಕುಲಕರ್ಣಿ, ಎಂ ಎನ್ ಸುಗಂಧಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಯವರ ಜೀವನ ಮತ್ತು ಸಾಧನೆಗಳನ್ನೊಳಗೊಂಡ ಸಣ್ಣ ಸಣ್ಣ ಪುಸ್ತಕಗಳನ್ನು ಮುದ್ರಿಸಿ ಶಾಲಾ ಮಕ್ಕಳಿಗೆ ವಿತರಿಸುವ ಕಾರ್ಯ ಮಾಡಲು ಪರಿಷತ್ತು ಸಿದ್ಧವಾಗಿದೆ. ಆ ಮೂಲಕ ಹಳಕಟ್ಟಿ ಶರಣರ ಜೀವನಚರಿತ್ರೆ ಇಂದಿನ ಮಕ್ಕಳಿಗೆ ಬಹು ದೊಡ್ಡ ಪ್ರೇರಣೆ ನೀಡುತ್ತದೆ. – ವಿಜಯಕುಮಾರ ಪಾಟೀಲ ತೇಗಲತಿಪ್ಪಿ, – ಅಧ್ಯಕ್ಷ, ಜಿಲ್ಲಾ ಕಸಾಪ  

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

51 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago