ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ-2007 ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 55 ಕ್ಲಿನಿಕ್ ಮತ್ತು ವೈದ್ಯರಿಗೆ ಒಟ್ಟು 22.27 ಲಕ್ಷ ರೂ. ದಂಡ ವಿಧಿಸಲು ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಕೆ.ಪಿ.ಎಂ.ಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 42 ಜನರಿಗೆ ತಲಾ 50 ಸಾವಿರ ರೂ., 5 ಜನರಿಗೆ ತಲಾ 20 ಸಾವಿರ ರೂ., 5 ಜನರಿಗೆ ತಲಾ 5 ಸಾವಿರ ರೂ., ಇಬ್ಬರಿಗೆ ತಲಾ 1ಸಾವಿರ ರೂ. ದಂಡ ವಿಧಿಸಿ ಕೂಡಲೆ ದಂಡ ಕಟ್ಟಲು ಆದೇಶಿಸಿಲಾಗಿದೆ. ಉಳಿದಂತೆ 6 ಜನ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಮೊಕದೊಮ್ಮೆ ಹೂಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಅವರು ಎಚ್ಚರಿಕೆ ನೀಡಿದ್ದಾರೆ.
ಕಳೆದ ಡಿಸೆಂಬರ್ ದಿಂದ ಜೂನ್ ಮಾಹೆ ವರೆಗೆ ಸಹಾಯಕ ಆಯುಕ್ತರ ನೇತೃತ್ವದ ತಪಾಸಣಾ ತಂಡ ನಿಯಮಿತ ದಾಳಿ ನಡೆಸಿ ಒಟ್ಟು 61 ಕ್ಲಿನಿಕ್ ಮತ್ತು ವೈದ್ಯರ ಮೇಲೆ ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖಾ ಎಫ್.ಐ.ಆರ್. ದಾಖಲಿಸಿ ಡಿ.ಸಿ. ಅಧ್ಯಕ್ಷತೆಯ ಕುಂದುಕೊರತೆ ಪ್ರಾಧಿಕಾರದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಅದರಂತೆ ಮಂಗಳವಾರ ಸಭೆಗೆ ಅಗಮಿಸಿದ ವೈದ್ಯರ ಅಹವಾಲು ಆಲಿಸಿ ಡಿ.ಸಿ. ದಂಡ ವಿಧಿಸಿದ್ದಾರೆ.
ಸಭೆಯಲ್ಲಿ ಡಿ.ಎಚ್.ಓ. ಡಾ.ರತಿಕಾಂತ ಸ್ವಾಮಿ, ಆಳಂದ ತಹಶೀಲ್ದಾರ ಯಲ್ಲಪ್ಪ ಸುಬೇದಾರ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ಗಿರಿಜಾ ನಿಗ್ಗುಡಗಿ ಸೇರಿದಂತೆ ಇನ್ನಿತರ ಇದ್ದರು.
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…