ಕಲಬುರಗಿ: ಜಿಲ್ಲೆಯ ಜೀವನಾಡಿ ಭೀಮಾ ನದಿಯ ಉಪ ನದಿಯಾಗಿರುವ ಬೋರಿ ನದಿಯಿಂದ 1 ಟಿ.ಎಂ.ಸಿ ನೀರೆತ್ತಿ ಅಫಜಲಪೂರ ತಾಲೂಕಿನ 10, ಆಳಂದ ತಾಲೂಕಿನ 3 ಕೆರೆ ಹಾಗೂ ಅಮರ್ಜಾ ಜಲಾಶಯ ಭರ್ತಿ ಮಾಡುವ ಕಾಮಗಾರಿ ತೀವ್ರಗೊಳಿಸಬೇಕು ಎಂದು ಮುಖ್ಯಮಂತ್ರಿಯವರ ನೀತಿ ಮತ್ತು ಕಾರ್ಯಕ್ರಮ ಸಲಹೆಗಾರರಾಗಿರುವ ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ನೀರಾವರಿ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಭೀಮಾ ಮತ್ತು ಅಮರ್ಜಾ ನೀರಾವರಿ ವಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇತ್ತೀಚಿನ ವರ್ಷದಲ್ಲಿ ಮಳೆ ಕೊರತೆಯಿಂದ ಅಂತರ್ಜಲ ಬತ್ತಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. 318 ಕೋಟಿ ರೂ. ಮೊತ್ತದ ಈ ಯೋಜನೆ ಸಾಕಾರಗೊಂಡಲ್ಲಿ ಅಂತರ್ಜಲ ಹೆಚ್ಚಲಿದ್ದು, ತಕ್ಕಮಟ್ಟಿಗೆ ಜನ-ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ಕಾಮಗಾರಿಗೆ ಚುರುಕು ನೀಡಿ ಬೇಗ ಮುಗಿಸಬೇಕೆಂದರು.
ಅಫಜಲಪೂರ ತಾಲೂಕಿನ ಅರ್ಜುಣಗಿ ಹತ್ತಿರ ರೈಲ್ವೆ ಕ್ರಾಸಿಂಗ್ ಕಾಮಗಾರಿ ಸಹ ಶೀಘ್ರ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೂ ಬಿ.ಆರ್.ಪಾಟೀಲ ಸೂಚನೆ ನೀಡಿದ ಅವರು, ಇನ್ನು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಭೂಸ್ವಾಧೀನ ಕಾರ್ಯ ವಿಳಂಬವಾಗದಂತೆ ನೋಡಿಕೊಳ್ಳಬೇಕೆಂದು ಸಬೆಯಲ್ಲಿದ್ದ ಎಸ್.ಎಲ್.ಎ.ಓ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೆ.ಎನ್.ಎನ್.ಎಲ್ ಮುಖ್ಯ ಅಭಿಯಂತ ವಿಜಯದಶರಥ ಸಂಘನ್, ಅಧೀಕ್ಷಕ ಇಂಜಿನೀಯರ್ ಸೂರ್ಯಕಾಂತ ಮಾಲೆ, ಕಾರ್ಯನಿರ್ವಾಹಕ ಇಂಜಿನೀಯರ್ ಸಂತೋಷ ಸಜ್ಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…