371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

0
10

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 ಜೆ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

Contact Your\'s Advertisement; 9902492681

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಡಿ.ರಣ್‌ದೀಪ್‌, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್‌ ಕುಮಾರ್‌, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here