ಪ್ರೊ. ಎ. ಎಸ್. ಹೊಸಮನಿ ಜಪಾನ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆ

0
5
???????

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಫಕ ಹಾಗೂ ವಾಣಿಜ್ಯ ನಿಕಾಯದ ಡೀನ್ ಪ್ರೊ. ಎ. ಎಸ್. ಹೊಸಮನಿ ಜಪಾನ್ ದೇಶದಲ್ಲಿ ಜರುಗಲಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ (ಐಎಹೆಚ್‍ಪಿಇಡಿಎಸ್) ಸಂಶೋಧನಾ ಪ್ರಬಂಧ ಮಂಡಿಸಲು ಆಯ್ಕೆಯಾಗಿದ್ದಾರೆ.

ಜಪಾನ್ ದೇಶದ ಟೋಕಿಯೋ ನಗರದಲ್ಲಿರುವ ಗಾಕುಗಾಯಿ ವಿಶ್ವವಿದ್ಯಾಲಯದಲ್ಲಿ ಜು.4 ರಿಂದ 11 ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು “ಸ್ಪೋಟ್ರ್ಸ ಕಲ್ಚರ್ ಇನ್ ಇಂಡಿಯಾ” ವಿಷಯ ಕುರಿತು ಪ್ರಬಂಧ ಮಂಡಿಸಲಿದ್ದಾರೆ.

Contact Your\'s Advertisement; 9902492681

ಜಪಾನ್ ದೇಶದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಆಯ್ಕೆಯಾಗಿರುವ ಪ್ರೊ. ಎ. ಎಸ್. ಹೊಸಮನಿ ಅವರನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ, ಕುಲಸಚಿವ ಸೋಮಲಿಂಗಪ್ಪ ಜಿ. ಗೆಣ್ಣೂರು, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ವಿತ್ತಾಧಿಕಾರಿ ಕು. ಗಾಯಿತ್ರಿ, ಆಡಳಿತ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ ಕೆಳಮನಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅಭಿನಂದಿಸಿದ್ದಾರೆ. ಅವರ ವಿದೇಶ ಪ್ರವಾಸ ಸುಖಕರವಾಗಿರಲೆಂದು ವಾಣಿಜ್ಯ ಅಧ್ಯಯನ ವಿಭಾಗದ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಶುಭ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here