ಆದಿಜಾಂಭವ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಮೀಸಲಿಡಲು ಆಗ್ರಹ

0
9

ಕಲಬುರಗಿ: ಕಳೆದ 25 ವರ್ಷಗಳಿಂದ ಮಾದಿಗರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವಿವಿಧ ರಾಜಕೀಯ ಆಡಳಿತ ಸರಕಾರಗಳಿಗೆ ಪ್ರತಿಭಟನೆ,ಧರಣಿ, ಸತ್ಯಾಗೃಹ, ಮನವಿ ಮುಖಾಂತರ ಹೋರಾಟಗಳನ್ನು ಮಾಡುತ್ತಾ ಬಂದಿರುತ್ತೇವೆ.ಬರುವ ಮುಂಗಾರು ಅಧಿವೇಶನದಲ್ಲಿ ಮಾದಿಗರ ಬೇಡಿಕೆಗಳನ್ನು ಈಡೇರಿಸಬೇಕೆಂದು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ದಲಿತ ಜನ ಜಾಗೃತಿ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ರುಕ್ಕಪ್ಪ ಟಿ ಕಾಂಬಳೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಬರುವ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಮೀಸಲಿಡಬೇಕು,ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶಿವಶರಣ ಮಾದಾರ ಚನ್ನಯ್ಯ ಅಧ್ಯಯನ ಪೀಠದ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ.ಬಿಡುಗಡೆ ಮಾಡಬೇಕು.ಶಿವಮೊಗ್ಗ ಜಿಲ್ಲೆಯ ಶಿಕಾರಿಪೂರದ ಬಳ್ಳಿಗಾವಿಯಲ್ಲಿ ಶಿವಶರಣ ಮಾದಾರ ಚನ್ನಯ್ಯ ಅವರ ಜನ್ಮಸ್ಥಳದ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು.ನಗರದಲ್ಲಿ ಶಿವಶರಣ ಮಾದಾರ ಚನ್ನಯ್ಯ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಿವಶರಣ ಮಾದಾರ ಚನ್ನಯ್ಯ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು.ಮತ್ತು ಮಾದಿಗ ಸಮಾಜದ ಕಾಂಗ್ರೆಸ್ ಕಾರ್ಯಕರ್ತರನ್ನು ನಿಗಮ ಮಂಡಳಿಯಲ್ಲಿ ಉನ್ನತ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಅಮೀರಸಾಬ ನದಾಫ,ಧರ್ಮಣ್ಣಾ ಬಿ ಪೂಜಾರಿ,ಶಿವಶರಣ ಲಿಂಗದಳ್ಳಿ,ರಾಜು ಭಂಡಾರಿ,ಸುರೇಖಾ ವಾಡೇಕರ,ರಮೇಶ ಕಟ್ಟಿಮನಿ,ನಾಗರಾಜ ಮುದ್ನಾಳ,ಸಿದ್ದು ತಾರಪೈಲ,ವಿಜಯಕುಮಾರ ಎಂ ಸಾವಳಗಿ,ಬಸವರಾಜ ಎಚ್ ಗದಗಿ,ಸುದೀರ ಜಿ ತೇಲಂಗಿ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here