ಬಿಸಿ ಬಿಸಿ ಸುದ್ದಿ

ವಾಸವದತ್ತಾ ರೈಲು ಸಂಚಾರ ಸಮಯ ಬದಲು : ಡಿಸಿ ಭರವಸೆ

ರೈಲ್ವೆ ಇಲಾಖೆ ಜೊತೆಗೆ ಚರ್ಚಿಸಿ ಕ್ರಮ : ನಂತರ ರೈಲು ಹಳಿ ಸ್ಥಳಾಂತರಕ್ಕೆ ಕ್ರಮ

ಸೇಡಂ: ವಾಸವದತ್ತಾ ಸಿಮೆಂಟ್ ಕಾರ್ಖಾನೆಗೆ ಹಾದುಹೋಗಿರುವ ರೈಲು ಸಂಚಾರ ಸಮಯ ಬದಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭರವಸೆ ನೀಡಿದ್ದಾರೆ.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ನೇತೃತ್ವದ ಜನಸ್ಪಂದನಾ ಸಭೆಯಲ್ಲಿ, ಸೇಡಂ ಜನಹಿತ ರಕ್ಷಣಾ ಸಮಿತಿ ಸಲ್ಲಿಸಿದ ಮನವಿ ಆಲಿಸಿದ ಅವರು, ಕೂಡಲೆ ರೈಲ್ವೆ ಇಲಾಖೆಯ ಸಿಕಿಂದರಾಬಾದ ಡಿವಿಜನ್ ಅಧಿಕಾರಿಗಳಿಗೆ ಸೂಚಿಸಿ ರೈಲು ಸಮಯ ಬದಲಿಸುವುದಾಗಿ ಹೇಳಿದರು.
ಅಲ್ಲದೆ ರೈಲ್ವೆ ಹಳಿ ಸ್ಥಳಾಂತರ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಲಾಗವುದು. ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಅವರು ಇದೇ ವೇಳೆ ಹೇಳಿದ್ದಾರೆ.

ಅನೇಕ ವರ್ಷಗಳಿಂದ ಪಟ್ಟಣದ ಹೃದಯ ಭಾಗದಿಂದ ವಾಸವದತ್ತಾ ಸಿಮೆಂಟ್ ಕಾರ್ಖಾನೆಗೆ ಹಾದುಹೋಗಿರುವ ರೈಲು ಹಳಿಯಿಂದ ದಿನನಿತ್ಯ ಸಾವಿರಾರು ಜನ ತೊಂದರೆ ಎದುರಿಸುತ್ತಿದ್ದರು. ಪಟ್ಟಣದ ರೈಲು ಹಳಿಯ ಒಂದು ಭಾಗದಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು, ಸರಕಾರಿ ಶಾಲಾ, ಕಾಲೇಜುಗಳು ಹಾಗೂ ಸರಕಾರಿ ಕಚೇರಿಗಳು ಇದ್ದು, ಪ್ರತಿನಿತ್ಯ ಹತ್ತಾರು ಗೂಡ್ಸ್ ರೈಲುಗಳ ಸಂಚಾರದಿAದ ಸಾವು ನೋವುಗಳು ಸಂಭವಿಸಿದ್ದವು. ಆದರೂ ಸಹ ಸಿಮೆಂಟ್ ಕಾರ್ಖಾನೆ ಇದರ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಇತ್ತೀಚೆಗೆ ಸೇಡಂ ಜನಹಿತ ರಕ್ಷಣಾ ಸಮಿತಿ ವತಿಯಿಂದ ಕೇಂದ್ರದ ಮತ್ತು ರಾಜ್ಯದ ರೈಲ್ವೆ ಸಚಿವರಿಗೆ ಮನವಿ ಪತ್ರ ರವಾನಿಸಿ, ಸಮಸ್ಯೆಗೆ ತಿಲಾಂಜಲಿ ಹಾಡಬೇಕು. ರೈಲ್ವೆ ಇಲಾಖೆ ಬೇಕಾಬಿಟ್ಟಿಯಾಗಿ ರೈಲು ಸಂಚಾರಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಹ ಸಮಿತಿಯ ಮನವಿಗೆ ಸ್ಪಂಧಿಸಿದ್ದು, ಶೀಘ್ರವೆ ಸಮಸ್ಯೆಗೆ ಪರಿಹಾರ ಕಂಡುಕೊಡುವ ಭರವಸೆ ನೀಡಿದ್ದು, ಸಾರ್ವಜನಿಕರಲ್ಲಿ ಭರವಸೆ ಮೂಡುವಂತಾಗಿದೆ.

ವಿಹಿAಪ ಪ್ರಾಂತ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮೆಕ್ಯಾನಿಕ್, ಸಿದ್ದಪ್ಪ ನಿಲಂಗಿ, ಮಳಖೇಡ ಗ್ರಾಮ ಪಂಚಾಯತ ಸದಸ್ಯ ಉಮೇಶ ಜಾಧವ, ರೈತ ಮುಖಂಡ ಆಮಶೆಟ್ಟಿ ಪಾಟೀಲ ಹೆಡ್ಡಳ್ಳಿ, ವಸಂತ ಪೂಜಾರಿ ಇತರರು ಈ ವೇಳೆ ಹಾಜರಿದ್ದರು.

ಹೋರಾಟಕ್ಕೆ ವರ್ತಕರ ಸಂಘದ ಬೆಂಬಲ: ಸೇಡಂ ಜನಹಿತ ರಕ್ಷಣಾ ಸಮಿತಿಯ ಹೋರಾಟಕ್ಕೆ ವರ್ತಕರ ಸಂಘ ಬೆಂಬಲ ನೀಡಿದೆ. ಅಲ್ಲದೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಮತ್ತಷ್ಟು ಬಲಿಷ್ಠ ಮಾಡುವುದಾಗಿ ಸಂಘದ ಅಧ್ಯಕ್ಷ ಶಿವಕುಮಾರ ಬೋಳಶೆಟ್ಟಿ ತಿಳಿಸಿದ್ದಾರೆ.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

9 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago