ಬಿಸಿ ಬಿಸಿ ಸುದ್ದಿ

ಅಭಾ ವೀರಶೈವ ಲಿಂಗಾಯತ ಮಹಾಸಭಾ ಚುನಾಣೆಗೆ 22 ನಾಮಪತ್ರ ಸಲ್ಲಿಕೆ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು 22 ಜನ ಆಕಾಂಕ್ಷಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವಕುಮಾರ ಮಸ್ಕಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿ,ಜುಲೈ 4ರ ಬುಧವಾರ ಮಧ್ಯಾನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು,ಅದರಲ್ಲಿ ಅಧ್ಯಕ್ಷಸ್ಥಾನಕ್ಕೆ 5 ಜನ ಹಾಲಿ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಎರಡನೇ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದರೆ,ಇನ್ನುಳಿದಂತೆ ಜಗದೀಶ ಪಾಟೀಲ್ ಸೂಗೂರ,ಪ್ರಕಾಶ ಅಂಗಡಿ ಕನ್ನೆಳ್ಳಿ,ವಿರೇಶ ಪಂಚಾಂಗಮಠ ಹಾಗೂ ಶಿವರಾಜ ಸಾಹು ಸೂಗೂರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.ನಿರ್ದೇಶಕ ಸ್ಥಾನಕ್ಕೆ 14 ಜನ ಪುರುಷರು ಹಾಗೂ 3 ಜನ ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ.ಇಂದು (ಗುರುವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಜುಲೈ 21 ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಚನ್ನಬಸಯ್ಯ ಸ್ವಾಮಿ ಜೇಟಗಿಮಠ ಅವರು ಕೂಡ ಉಪಸ್ಥಿತರಿದ್ದರು.

ಹಾಲಿ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಎರಡನೇ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಸಹಾಯಕ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೂಚಕ ಸೋಮಶೇಖರ ಶಾಬಾದಿ,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರಮಠ,ವಿರೇಶ ನಿಷ್ಠಿ ದೇಶಮುಖ,ಶಿವರುದ್ರ ಉಳ್ಳಿ,ರವಿಗೌಡ ಹೆಮನೂರ,ಚಂದ್ರಶೇಖರ ಡೊಣೂರ,ಪ್ರಕಾಶ ಅಂಗಡಿ ಹೆಮ್ಮಡಗಿ ಇತರರು ಉಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

58 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

16 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

16 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

18 hours ago