13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

0
158
ಸಂದರ್ಭಿಕ ಚಿತ್ರ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ ಯೋಜನೆಗಳಡಿ (ಸುವಿಧಾ ಯೋಜನೆ) ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶು ಪಾಲನಾ ಭತ್ಯೆ, ನಿರುದೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ದಲ್ಲಿ ಆನ್‍ಲೈನ್ ಮೂಲಕ 2024ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಈ ಹಿಂದೆ 2023-24ನೇ ಸಾಲಿನಲ್ಲಿ ಮೇಲಿನ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವ ಅರ್ಜಿದಾರರು ಮತ್ತೊಮ್ಮೆ ಕಡ್ಡಾಯವಾಗಿ ಸೇವಾಸಿಂಧು ಪೊರ್ಟೆಲ್‍ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ/ ವಿಕಲಚೇತನರ ಸಹಾಯವಾಣಿ ಸಂಖ್ಯೆ 08472-235222 ಅಥವಾ ಕಲಬುರಗಿ-9972079714, ಅಫಜಲಪೂರ-8880023232 ಆಳಂದ-9483054495, ಜೇವರ್ಗಿ- 9741875881, ಚಿತ್ತಾಪೂರ-9845204328, ಚಿಂಚೋಳಿ-9880671171, ಸೇಡಂ-9902417925 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here