ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
398

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅಫಜಲಪೂರ ತಾಲೂಕಿನಲ್ಲಿ 17 ಅಂಗನವಾಡಿ ಕಾರ್ಯಕರ್ತೆಯರ ಮತ್ತು 25 ಸಹಾಯಕಿಯರ ಹುದ್ದೆಗಳು, ಆಳಂದ ತಾಲೂಕಿನಲ್ಲಿ 05 ಅಂಗನವಾಡಿ ಕಾರ್ಯಕರ್ತೆಯರ ಮತ್ತು 26 ಸಹಾಯಕಿಯರ ಹುದ್ದೆಗಳು, ಚಿಂಚೋಳಿ ತಾಲೂಕಿನಲ್ಲಿ 07 ಅಂಗನವಾಡಿ ಕಾರ್ಯಕರ್ತೆಯರ ಮತ್ತು 15 ಸಹಾಯಕಿಯರ ಹುದ್ದೆಗಳು, ಚಿತ್ತಾಪುರ ತಾಲೂಕಿನಲ್ಲಿ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಕಲಬುರಗಿ (ಗ್ರಾಮೀಣ) ಯೋಜನೆ ವ್ಯಾಪ್ತಿಯಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಮತ್ತು 20 ಸಹಾಯಕಿಯರ ಹುದ್ದೆಗಳು, ಕಲಬುರಗಿ(ನಗರ) ಯೋಜನೆ ವ್ಯಾಪ್ತಿಯಲ್ಲಿ 92 ಅಂಗನವಾಡಿ ಸಹಾಯಕಿಯರ ಹುದ್ದೆಗಳು, ಜೇವರ್ಗಿ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರ ಮತ್ತು 20 ಸಹಾಯಕಿಯರ ಹುದ್ದೆಗಳು, ಸೇಡಂ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಮತ್ತು 19 ಸಹಾಯಕಿಯರ ಹುದ್ದೆಗಳು ಹಾಗೂ ಶಹಾಬಾದ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಮತ್ತು 11 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು https://karnemakaone.kar.nic.in/abcd ವೆಬ್‍ಸೈಟ್‍ದಲ್ಲಿ ಅನ್‍ಲೈನ್ ಮೂಲಕ 2024ರ ಆಗಸ್ಟ್ 7 ರ ಸಂಜೆ 5.30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ (ಗ್ರಾಮೀಣ): ಅಂಗನವಾಡಿ ಕಾರ್ಯಕರ್ತೆಯರ

ಹಾಗೂ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 20 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಆಗಸ್ಟ್ 7 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಹಿತಿಗಾಗಿ ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ (ನಗರ): ಅಂಗನವಾಡಿ ಸಹಾಯಕಿಯರ

ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಪ್ರಸಕ್ತ 2024-25ನೇ ಸಾಲಿನಲ್ಲಿ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 92 ಅಂಗನವಾಡಿ ಸಹಾಯಕಿಯರ ಗೌರವಧನ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಆಗಸ್ಟ್ 7 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ವಿವರವನ್ನು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕ, ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ. ಮಹಾನಗರ ಪಾಲಿಕೆಯ ವಲಯ 1.2 ಮತ್ತು 3ರ ಆಯುಕ್ತರ ಕಚೇರಿ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿನ ಸೂಚನಾ ಫಲಕದ ಮೇಲೆ ಪ್ರದರ್ಶಿಸಲಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಜೇವರ್ಗಿ: ಅಂಗನವಾಡಿ ಕಾರ್ಯಕರ್ತೆಯರ

ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ; ಪ್ರಸಕ್ತ 2024-25ನೇ ಸಾಲಿನಲ್ಲಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 20 ಅಂಗನವಾಡಿ ಸಹಾಯಕಿಯರ ಗೌರವಧನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2024ರ ಆಗಸ್ಟ್ 7ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ವಿವರವನ್ನು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಕಚೇರಿಯ ಸೂಚನಾ ಫಲಕ, ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯ ಕೃಷಿ ಸಂಪರ್ಕ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆಗಳು, ಅಂಗನವಾಡಿ ಕಟ್ಟಡ, ಗ್ರಾಮ ಲೆಕ್ಕಿಗರ ಕಚೇರಿ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ಹಾಗೂ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here