ನೂತನ ಆಯ್ಕೆಯಾದ ಸಂಸದ, ಎಂಎಲ್‍ಸಿಗಳಿಗೆ ಇಂದು ಅಭಿನಂದನಾ ಸಮಾರಂಭ: ಶಾಸಕ ಅಲ್ಲಮಪ್ರಭು ಪಾಟೀಲ

0
15

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ, ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಜಗದೇವ್ ಗುತ್ತೇದಾರ್ ಹಾಗೂ ಡಾ. ಚಂದ್ರಶೇಖರ್ ಪಾಟೀಲ್ ಹುಮನಾಬಾದ ಇವರಿಗೆ ಇಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ನೇತೃತ್ವದಲ್ಲಿ ಸಭೆಯಲ್ಲಿ ಮಾತನಾಡಿದರು.

ಚುನಾಯಿತ ಪ್ರತಿನಿಧಿಗಳು, ಎಲ್ಲಾ ಮುಂಚಿಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

Contact Your\'s Advertisement; 9902492681

ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ದಕ್ಷಿಣ ಗ್ರಾಮೀಣ ಬ್ಲಾಕ್ ಸಮಿತಿ ಅಧ್ಯಕ್ಷ ಲಿಂಗರಾಜ್ ಕಣ್ಣಿ, ಮುಖಂಡರಾದ ಸಂಗಮೇಶ್ ನಾಗನಹಳ್ಳಿ, ಸೋಮಶೇಖರ್ ಹಿರೇಮಠ್, ಹುಲಿಗೆಪ್ಪ ಕನಕಗಿರಿ, ಲತಾ ರಾಠೋಡ, ಧರ್ಮರಾಜ್ ಹೇರೂರ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here