ಅಧಿವೇಶನ ಬಳಿಕ ಕಲಬುರಗಿಯಲ್ಲಿ ಸಿಎಂ ಜನಸ್ಪಂದನ ಸಭೆ

0
102

ಸೆಪ್ಟೆಂಬರ್ ನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಮುಂಗಾರು ಅಧಿವೇಶನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಬುರಗಿಯಲ್ಲಿ ಜನಸ್ಪಂದನ ಸಭೆ ನಡೆಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದರು.

ನಿರ್ಮಾಣ ಹಂತದಲ್ಲಿರುವ ಜಯದೇವ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್ ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ಆಸ್ಪತ್ರೆಗೆ ಅಗತ್ಯವಾದ ಸಿಬ್ಬಂದಿಯಿದ್ದು, ಹೆಚ್ಚುವರಿ ಸಿಬ್ಬಂದಿ ಅವಶ್ತಕತೆ ಬಿದ್ದರೆ ಮತ್ತೊಮ್ಮೆ ಸಭೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು. ನಿರ್ಮಾಣಕ್ಕೆ ಬೇಕಾಗಿರುವ ಹೆಚ್ಚುವರಿ ಹಣವನ್ನು ಸಹ ಬಜೆಟ್ ನಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.

ಮುಂಬರುವ ದಿನಗಳಲ್ಲಿ ಕಲಬುರಗಿಯಲ್ಲಿ ಸರಸ್ ಮೇಳ ( ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಪ್ರದರ್ಶನ ಹಾಗೂ ಮಾರಾಟ) ಹಾಗೂ ವಿಭಾಗ ಮಟ್ಟದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುವುದು. ರಾಜ್ಯದ ಮೂರು ಕಡೆ ಹೊಸ ಮೆಡಿಕಲ್ ಕಾಲೇಜು ಹಾಗೂ ಕನಕಪುರ ಮತ್ತು ರಾಮನಗರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಲಬುರಗಿ, ತಳಕಲ್ ಮೈಸೂರು ನಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಸ್ಕಿಲ್ ಡೆವೆಲಪ್ ಮೆಂಟ್ ಸೆಂಟರ್ ಪ್ರಾರಂಭಿಸಲಾಗುವುದು. 300 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಸ್ಕಿಲ್ ಪಾರ್ಕ್ ಆರಂಭಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ವಿವರಿಸಿದರು.

ಜಿಟಿಡಿಸಿಯಲ್ಲಿ ಮಕ್ಕಳು ಅಡ್ಮಿಷನ್ ಮಾಡಿದರೆ ಸ್ವಯಂ ಉದ್ಯೋಗ ಕಟ್ಟಿಟ್ಟ ಬುತ್ತಿ ಎಂದು ಹೇಳಿದ ಅವರು ಈ ಬಾರಿ 5000 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಪಿಜಿ ಅನ್ಯಾನ್ಸ್ಮೆಂಟ್ ಪ್ರಾರಂಭಿಸಲು ವರದಿ ಕೇಳಿದ್ದು, ಇದರಿಂದ ಬಡ ಮಕ್ಕಳಿಗೆ ಓದಲು ಅನುಕೂಲವಾಗಲಿದೆ ಎಂದರು.

ನೀಟ್ ಪರೀಕ್ಷೆಯಲ್ಲಿ ಕ್ಷಮತೆ ಇಲ್ಲ: ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಮೆರಿಟ್ ಆಧಾರದ ಮೇಲೆ ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು ಬಿಟ್ಟು ಕೇಂದ್ರ ಸರ್ಕಾರ ಕಾರ್ಯಕ್ಷಮತೆ ಮರೆತಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ ಆರೋಪಿಸಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here