ಕಲಬುರಗಿ: ಗುರುವಾರ ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅನಾಥೆಯರ ಅಪರೂಪದ ಮದುವೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸಾಕ್ಷಿಯಾಗಿ ನವ ವಧು-ವರರಿಗೆ ಉಡುಗೊರೆಯೊಂದು ನೀಡಿ ಶುಭ ಕೋರಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ
ಗುತ್ತಿಗೆ ಮೇಲೆ ಗ್ರೂಪ್ ‘ಡಿ’ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಕಲಬುರಗಿ ನಗರದ ಬಾಪು ನಗರ ನಿವಾಸಿ ಶರಣಮ್ಮ ತಂದೆ ಲಕ್ಣ್ಮಣ ಅವರಿಗೆ ವಾಡಿ ಪಟ್ಟಣದ ನಿವಾಸಿ ಮೌನೇಶ ಅವರು ತಾಳಿ ಕಟ್ಟುವ ಮೂಲಕ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿಯೇ ನೂತನ ಬದುಕಿಗೆ ಹೆಜ್ಜೆ ಇಟ್ಟರು.
ತಂದೆ-ತಾಯಿ ಇಲ್ಲದ ಮೌನೇಶ ಸ್ಥಳೀಯ ಸರ್ಕಾರಿ ಕಚೇರಿಯಲ್ಲಿ ಗುತ್ತಿಗೆ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಬಾಡಿಗೆ ಮನೆ ಪಡೆದು ವಾಸವಾಗಿದ್ದಾರೆ. ಅದೇ ರೀತಿ ಚಿಕ್ಕ ವಯಸ್ಸಿನಲ್ಲಿ ಹೆತ್ತವರನ್ನು ಕಳೆದುಕೊಂಡ ಶರಣಮ್ಮ ಸಹ ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಡಿ.ಸಿ. ಅವರ ಮನೆಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಸಹೋದರಿ ಮದುವೆ ಮಾಡಿಕೊಂಡು ರಾಯಚೂರಿಗೆ ಹೋಗಿದ್ದರಿಂದ ಇವರು ಒಂಟಿಯಾಗಿ ನಗರದಲ್ಲಿ ನೆಲೆಸಿದ್ದರು. ಸೋಮವಾರ ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಕಾನೂನು ಬದ್ಧವಾಗಿ ಮದುವೆ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…