ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಇದೇ ಜುಲೈ 13ನೇ ತಾರಿಕು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ದಿಂದ 2ನೇ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,13 ರಂದು ಬೆ.10 ಗಂಟೆಗೆ ನಡೆಯುವ ಸಮ್ಮೇಳನವನ್ನು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಾಲಿನಿ ಮೆಸ್ತಾ ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ನೂತನ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ತಾಲೂಕ ಅಧ್ಯಕ್ಷೆ ಸೌಜಾದಿ ಬೇಗಂ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ,ತಾ.ಪಂ ಇಒ ಬಸವರಾಜ ಸಜ್ಜನ್,ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪಂಡೀತ ನಿಂಬೂರ,ಸಂಘದ ರಾಜ್ಯ ಉಪಾಧ್ಯಕ್ಷೆ ಸಿದ್ದಮ್ಮ ಬಾಗಲೋಟ,ಸುನಂದಾ ಹಿರೇಮಠ, ಸಿಐಟಿಯು ಜಿಲ್ಲಾಧ್ಯಕ್ಷ ಶಾಂತಾ ಎನ್.ಘಂಟಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿ.ಪ್ರ.ಕಾರ್ಯದರ್ಶಿ ಸೋಮರಡ್ಡಿ ಮಂಗಿಹಾಳ,ಮುಖಂಡ ಮಲ್ಲಯ್ಯ ಪೋಲಂಪಲ್ಲಿ,ಪ್ರಕಾಶ ಆಲ್ಹಾಳ,ಈರಮ್ಮ ಹೈಯಾಳಕರ್,ಅಂಗನವಾಡಿ ನೌಕರರ ಸಂಘದ ತಾಲೂಕ ಅಧ್ಯಕ್ಷೆ ಬಸಮ್ಮ ಆಲ್ಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ ಎಂದು ತಿಳಿಸಿದ್ದಾರೆ.