ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಸೆಂಟ್ರಲ್ ಆರ್‍ಬಿಐ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಸ್ವ ಸಹಾಯ ಗುಂಪಿನ ಮಹಿಳೆಯರ ಸಂವಾದ ಕಾರ್ಯಕ್ರಮ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕರಾದ ಅಲೋಕ್ ಸಿನ್ ಅವರು ಮಾತನಾಡಿ,ಬ್ಯಾಂಕ್‍ಗಳು ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ.ಬ್ಯಾಂಕ್‍ಗಳು ಸ್ವ ಸಹಾಯ ಗುಂಪಿಗೆ ನೀಡುವ ಸಾಲ ಸೌಲಭ್ಯ ಹಾಗೂ ಸಬ್ಸಿಡಿ ಹಣವನ್ನು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡ ವೆಂಕಟೇಶ ಬೇಟೆಗಾರ ಮಾತನಾಡಿ,ಇಂದು ಬ್ಯಾಂಕ್‍ಗಳ ಮೂಲಕ ಸಿಗುವ ಸೌಲಭ್ಯಗಳು ಕುಟುಂಬಗಳನ್ನು ಅಭಿವೃಧ್ಧಿ ಪಡಿಸುತ್ತವೆ,ಮಹಿಳೆಯರಿಗೆ ನೀಡುವ ಸಾಲ ಸೌಲಭ್ಯಗಳಿಂದ ಸಣ್ಣ ಸಣ್ಣ ವ್ಯಾಪಾರ,ಉದ್ಯಮಗಳನ್ನು ಆರಂಭಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಉನ್ನತಿ ಹೊಂದಬೇಕು,ಬ್ಯಾಂಕ್‍ಗಳಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರಳಿ ತುಂಬುವ ಮೂಲಕ ಹೆಚ್ಚಿನ ಸಬ್ಸಿಡಿಯನ್ನು ಪಡೆಯಬಹುದು ಮತ್ತು ಹೆಚ್ಚಿನ ಸಾಲವನ್ನು ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಭೀಮರಾಯ ಪಾಂಚಾಳ,ಎಡಿಬಿ,ಎಸ್‍ಬಿಐ ಬ್ಯಾಂಕ್ ವ್ಯವಸ್ಥಾಪಕರು,ಎನ್.ಆರ್.ಎಲ್.ಎಮ್ ಮೇಲ್ವಿಚಾರಕ ಆಮಪ್ಪ ಬಿಜಾಸಪುರ ಮಾತನಾಡಿದರು.
ದೇವರಗೋನಾಲ ಗ್ರಾಮದ ಸ್ವ ಸಹಾಯ ಸಂಘದ ಅಧ್ಯಕ್ಷರು,ಪದಾಧಿಕಾರಿ ಮಹಿಳೆಯರು ಸೇರಿದಂತೆ ಅನೇಕ ಜನ ಗ್ರಾಮಸ್ಥರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…