ಶಹಾಬಾದ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ಗಾಳಿ, ನೀರು, ಮಣ್ಣು ಮತ್ತು ವಾತಾವರಣ ಕಲುಷಿತಗೊಂಡು ರೋಗಗಳು ಹರಡುತ್ತವೆ. ಹಾಗಾಗಿ ಪ್ರತಿಯೊಬ್ಬರು ಜಾಗೃತರಾಗಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿμÉೀಧಿಸಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ಗುರುವಾರ ನಗರಸಭೆಯ ಕಾರ್ಯಾಲಯ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಆಯೋಜಿಸಲಾದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರ ಸಂರಕ್ಷ ಣೆ ಮತ್ತು ಪರಿಸರದ ಸ್ವಚ್ಛತೆ ಆಗಬೇಕಾಗದರೆ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿμÉೀಧಿಸಲು ಸಾರ್ವಜನಿಕರು ಪಣ ತೊಡಬೇಕು. ಪ್ಲಾಸ್ಟಿಕ್ ಬಳಕೆಯಿಂದ ಮಣ್ಣು, ನೀರು, ನಮ್ಮ ನಮ್ಮ ಸುತ್ತ ಮುತ್ತಲಿನ ಜೀವ ಸಂಕುಲ ಮತ್ತು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತದೆ. ಬೀದಿ ವ್ಯಾಪಾರಿಗಳು ಪ್ಲಾಸ್ಟಿಕ್‍ನಲ್ಲಿಯೇ ತಿಂಡಿ ಹಾಗೂ ಬಿಸಿಯಾದ ಸಾಂಬಾರ ಹಾಗೂ ಚಹಾ ಹಾಕಿ ಕೊಡಲಾಗುತ್ತಿದ್ದಾರೆ.
ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ಅಂಶಗಳು ಮನುಷ್ಯನ ದೇಹಕ್ಕೆ ನಾನಾ ಹಂತಗಳಲ್ಲಿ ಸೇರಿಕೊಂಡು ಮಾರಕ ರೋಗಗಳಿಗೆ ಕಾರಣವಾಗುತ್ತವೆ. ಥೈರಾಯ್ಡ್, ಅಸ್ತಮಾ, ಹೃದಯ ಕಾಯಿಲೆಗಳು, ಕೂದಲು ಮತ್ತು ಚರ್ಮದ ಸಮಸ್ಯೆ, ನರಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಹಾಗಾಗಿ ಯಾರೂ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡಬಾರದು ಎಂದು ತಿಳಿಸಿದರು.
ಅಲ್ಲದೇಪ್ಲಾಸ್ಟಿಕ್‍ಗಳನ್ನು ಚರಂಡಿಗಳಲ್ಲಿ ಎಸೆಯುವದರಿಂದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೇ ಗಬ್ಬೆದ್ದು ನಾರುತ್ತವೆ.ನೀರು ಸಂಗ್ರಹವಾಗುವುದರಿಂದಸೊಳ್ಳೆಗಳ ಉತ್ಪತ್ತಿಯಾಗುತ್ತವೆ.ಇದರಿಂದ ಮಲೇರಿಯಾ ಹಾಗೂ ಡೆಂಗ್ಯೂದಂತಹ ರೋಗಗಳು ಹರಡುತ್ತವೆ.ಆದ್ದರಿಂದ ಬೀದಿ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿμÉೀಧಿಸಬೇಕೆಂದು ಹೇಳಿದರು.
ನಗರಸಭೆಯ ಪರಿಸರ ಅಭಿಯಂತರ ಸುನೀಲ ಮಾತನಾಡಿ, ಪ್ರತಿಯೊಬ್ಬರ ಮನೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಪಣತೊಡಬೇಕಾಗಿದೆ. ಅಡುಗೆ ಮನೆಯ ಸಾಮಾಗ್ರಿಗಳು ಪ್ಲಾಸ್ಟಿಕ್‍ಮಯವಾಗುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ತೆರಳಿದಾಗ ಪ್ಲಾಸ್ಟಿಕ್ ಕವರ್‍ಗಳನ್ನು ನೆಚ್ಚಿಕೊಂಡಿರಬಾರದು. ಪ್ಲಾಸ್ಟಿಕ್ ಬದಲಾಗಿ ಪರಿಸರಸ್ನೇಹಿ ಬ್ಯಾಗ್‍ಗಳನ್ನು ಅನುಸರಿಸಿದರೆ ಪರಿಸರ ಸಂರಕ್ಷ ಣೆ ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ ಹಾಗೂ ಸಮುದಾಯ ಸಂಘಟನಾಧಿಕಾರಿ ರಘುನಾಥ ನರಸಾಳೆ ಮಾತನಾಡಿ, ಕೆಲವರು ಹೋಟೆಲ್‍ಗಳಲ್ಲಿ ಊಟ- ತಿಂಡಿಗಳನ್ನು ಕೂಡ ಪ್ಲಾಸ್ಟಿಕ್ ಕವರ್‍ಗಳಲ್ಲಿ ಸುತ್ತಿಕೊಂಡು, ಪ್ಯಾಕ್ ಮಾಡಿಸಿಕೊಂಡು ಮನೆಗೆ ತಂದು ತಿನ್ನುತ್ತಾರೆ. ಬಿಸಿ ಪದಾರ್ಥಗಳನ್ನು ಪ್ಲಾಸ್ಟಿಕ್ ಕವರ್‍ಗಳಲ್ಲಿ ಹಾಕಿದಾಗ ಸಹಜವಾಗಿ ಪ್ಲಾಸ್ಟಿಕ್ ಅಂಶ ಆಹಾರಕ್ಕೆ ಬೆರತು ವಿಷವಾಗುತ್ತದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ನಗರಸಭೆಯ ಸದಸ್ಯರಾದ ಸೂರ್ಯಕಾಂತ ಕೋಬಾಳ,ಸಾಬೇರಾಬೇಗಂ,ಮಲ್ಲಿಕಾರ್ಜುನ ವಾಲಿ,ನಾಗರಾಜ ಕರಣಿಕ್,ಮಹ್ಮದ್ ಅಮ್ಜದ್,ಶರಣಬಸಪ್ಪ ಪಗಲಾಪೂರ, ಸಿದ್ರಾಮ ಕುಸಾಳೆ, ನೈರ್ಮಲ್ಯ ನಿರೀಕ್ಷಕರಾದ ಮೈಹಿನೋದ್ದಿನ್,ಜೆಇ ರಬ್ಬಾನಿ,ನಾರಾಯಣರೆಡ್ಡಿ, ಅನೀಲಕುಮಾರ ಹೊನಗುಂಟಿಕರ್,ಹುಣೇಶ ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.
ನಗರಸಭೆಯ ಸರ್ವ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ನಗರದ ಪ್ರಮುಖ ವೃತ್ತಗಳಲ್ಲಿ ಜಾಥಾ ನಡೆಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…