ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯು ಹಾಗೂ ಚಿಕ್‍ಗುನ್ಯ ಪ್ರಕರಣ ಹೆಚ್ಚಾಗುತ್ತಿದ್ದು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರದಂದು ರಾಜ್ಯದ ಮುಖ್ಯಮಂತ್ರಿಗಳು ಜುಲೈ 8 ಮತ್ತು 9 ರಂದು ನಡೆದ ಸಭೆಯಲ್ಲಿ ತಿಳಿಸಿದ್ದಾರೆ. ಅಧಿಕಾರಿಗಳು ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಹಾಗೂ ಗ್ರಾಮ ಪಂಚಾಯತ ಆವರಣ, ಸರ್ಕಾರಿ ಆಸ್ಪತ್ರಗಳು/ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಫವಾಗಿ ಇಡುವುದು.
ಇತರೆ ಸರ್ಕಾರಿ ಕಟ್ಟಡಗಳಲ್ಲಿ ಸ್ವಚ್ಚತೆ ಕಾಪಾಡುವುದು ನೀರು ನಿಲ್ಲದಂತೆ ವ್ಯವಸ್ಥೆ ಮಾಡುಲು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫಾಗಿಂಗ್ ಮಾಡಿ ಸೊಳ್ಳೆಗಳಾಗದಂತೆ ತಡೆಗಟ್ಟುವುದರ ಕುರಿತು ಮತ್ತು ಡೆಂಗ್ಯೂ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಭೆಯಲ್ಲಿದ್ದ ಎಲ್ಲಾ ಪಂಚಾಯತ ಅಭಿವೃಧ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವುದು ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೋಳಿಸಿ ಮಾನವ ದಿನ ಸೃಜನೆ ಮಾಡಲು ತಿಳಿಸಿದರು, ನಂತರ ಸಮಗ್ರ ಶಾಲಾ ಅಭಿವೃಧ್ದಿ ಅಡಿಯಲ್ಲಿ ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ ಹಾಗೂ ಶಾಲಾ ಅಡುಗೆ ಕೋಣೆ ಕಾಮಗಾರಿಗಳನ್ನು ತೆಗೆದುಕೊಂಡು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಚ್ಚ ಭಾರತ ಮಿಷನ್ ಅಡಿಯಲ್ಲಿ ವೈಯಕ್ತಿಕ, ಸಮುದಾಯ ಶೌಚಾಲಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಿವಿಧ ವಸತಿ ಯೋಜನೆಯಡಿಯಲ್ಲಿ ನಿಗಡಿಪಡಿಸಿದ ಗುರಿ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸಲು ತಿಳಿಸಿದರು.
ಜನಸ್ಪಂದನ, ಐಪಿಜಿಆರ್‍ಎಸ್, ಪಬ್ಲಿಕ್ ಗ್ರೇವಿಯನ್ಸ್ ಗಳಲ್ಲಿ ದಾಖಲಾದ ದೂರುಗಳನ್ನು ತ್ವರಿತವಾಗಿ ಗುಣಾತ್ಮಕವಾಗಿ ವೀಲೆವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು
ಜಿಲ್ಲೆಯ ಎಲ್ಲಾ ಪಂಚಾಯತ ಅಭಿವೃಧ್ದಿ ಅಧಿಕಾರಿಗಳು ಕೇಂದ್ರಸ್ಥಾನಸಲ್ಲೆ ಇದ್ದು ಗ್ರಾಮ ಪಂಚಾಯತಗಳಲ್ಲಿ ತಮ್ಮ ಹಾಗೂ ಅಧೀನದ ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು ಎಂದು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ನಿರ್ದೇಶಕರಾದ ಜಗದೇವಪ್ಪ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…